ಭಕ್ತರ ಸೋಗಿನಲ್ಲಿ ಬಂದು ಚಂದ್ರಶೇಖರ್ ಗುರೂಜೀ ಕೊಲೆ

ಹುಬ್ಬಳ್ಳಿ:5 ಜುಲೈ 2022

ನಂದಿನಿ ಮೈಸೂರು

ಸರಳ ವಾಸ್ತು ಕಾರ್ಯಕ್ರಮದ ಮೂಲಕ ರಾಜ್ಯದ ಮನೆಮಾತಾಗಿದ್ದ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯಲ್ಲಿ ಕೊಲೆ ಮಾಡಲಾಗಿದೆ. ಭಕ್ತರ ಸೋಗಿನಲ್ಲಿ ಬಂದು ಚಾಕು ಇರಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಅವರನ್ನು ಅವರು ತಂಗಿದ್ದ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.
ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದರು.
ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್ ಲಾಬೂರಾಮ್ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್ ನಲ್ಲಿ ರಿಸಪ್ಶನ್‌ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ.
ಚಂದ್ರಶೇಖರ ಗುರೂಜಿ ಅವರ ಶವವನ್ನು ಪರೀಕ್ಷೆಗಾಗಿ ನಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಸರಳ ಜೀವನ, ಸರಳ ವಾಸ್ತು, ಸರಳ ಅಕಾಡೆಮಿ, ಮನೆಗಾಗಿ ವಾಸ್ತು, ವಾಸ್ತು ಪರಿಹಾರದ ಮೂಲಕ ಅವರು ಕರ್ನಾಟಕದ ಮನೆಮಾತಾಗಿದ್ದರು. ಈವರೆಗೂ 2 ಸಾವಿರಕ್ಕೂ ಅಧಿಕ ಸೆಮಿನಾರ್‌ಗಳಲ್ಲಿ ಮಾತನಾಡಿರುವ ಚಂದ್ರಶೇಖರ್, ಈವರೆಗೂ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ. ಸಿವಿಲ್ ಇಂಜಿನಿಯರಿAಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿಯನ್ನೂ ಅವರು ಸಂಪಾದಿಸಿದ್ದರು.

Leave a Reply

Your email address will not be published. Required fields are marked *