ನಂದಿನಿ ಮೈಸೂರು
ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಬುಧವಾರ ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದಿದ್ದು ಇತಿಹಾಸ ಪುಟದಲ್ಲಿ ಭಾರತ ಹೆಸರು ಸೇರಿದೆ.ವಿಕ್ರಮ ಲ್ಯಾಂಡ್ ಆಗುತ್ತಿದ್ದಂತೆ ವಿಜ್ಞಾನಿಗಳು ಸಂಭ್ರಮಿಸಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಇಡೀ ವಿಶ್ವವೇ ಬೆರಗು ಗಣ್ಣಿನಿಂದ ನೋಡುತ್ತಿತ್ತು. ಈ ಅದ್ಭುತವನ್ನು ಸಾಧಿಸುವ ಮೂಲಕ ಬಾಹ್ಯಾಕಾಶದಲ್ಲಿ ಸಾಧನೆ ಮಾಡಿದ ಇತರ ರಾಷ್ಟçಗಳಲ್ಲಿ ಭಾರತವೂ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಏಕೆಂದರೆ ಇದು ಚಂದ್ರನ ದಕ್ಷಿಣ ಧೃವವನ್ನು ತಲುಪಲಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಂಡಿದೆ.
ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ ಮಾನವನ ಜಾಣ್ಮೆ ಮತ್ತು ನಿರ್ಣಯಕ್ಕೆ ಸಾಕ್ಷಿಯಾಗಿದೆ. ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಒಳಗೊಂಡಿರುವ ಐಒ, ಚಂದ್ರನ ಭೂಪ್ರದೇಶದಲ್ಲಿ ಅತ್ಯಂತ ಸುರಕ್ಷಿತವಾಗಿ ಸಂಜೆ 6:04 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗಿದೆ.
ಚಂದ್ರಯಾನ-3 ರ ಲ್ಯಾಂಡಿAಗ್ ಭಾರತಕ್ಕೆ ಐತಿಹಾಸಿಕ ಮೈಲಿಗಲ್ಲಾಗಿದೆ. ಏಕೆಂದರೆ ಇದು ಚಂದ್ರನ ಮೇಲ್ಮೆöÊಯಲ್ಲಿ ಸಾಫ್ಟ್ ಲ್ಯಾಂಡಿAಗ್‌ನ ಸಂಕೀರ್ಣ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ರಾಷ್ಟçವಾಗಿ ಗುರುತಿಸಿಕೊಂಡಿದೆ. ಅಮೆರಿಕ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟಗಳ ಸಾಧನೆಯ ಶ್ರೇಣಿಗೆ ಸೇರಲಿದೆ. ಈ ಮೂಲಕ ಭಾರತ ಬಾಹ್ಯಾಕಾಶ ಪರಿಶೋಧನೆಯಲ್ಲಿ ವಿಕ್ರಮ ಸಾಧಿಸಿದ ಶ್ರೇಷ್ಠತೆಗೆ ಒಳಗಾಗಲಿದೆ.