ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಚೆಕ್‍ಪೋಸ್ಟ್‍ಗಳ ಕಾರ್ಯವೈಖರಿ ಪರಿಶೀಲನೆ

ನಂದಿನಿ ಮೈಸೂರು

*ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಚೆಕ್‍ಪೋಸ್ಟ್‍ಗಳ ಕಾರ್ಯವೈಖರಿ ಪರಿಶೀಲನೆ*

ಮೈಸೂರು : ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಈ ಚೆಕ್‍ಪೋಸ್ಟ್‍ಗಳ ಕಾರ್ಯವೈಖರಿ ಕುರಿತಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಇಂದು ಖುದ್ದಾಗಿ ಹುಣಸೂರು ವಿಧಾನಸಭಾ ಕ್ಷೇತ್ರದ ಜಾಬಗೆರೆ ಗೇಟ್ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಚೆಕ್‍ಪೋಸ್ಟ್ ನಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಂದರ್ಭದಲ್ಲಿ ಜನರಿಗೆ ಆಮಿಷವೊಡ್ಡಲು ಹಲವು ಬಗೆಯಲ್ಲಿ ಪ್ರಯತ್ನಗಳು ನಡೆಯುವ ಸಾಧ್ಯತೆಗಳಿರುತ್ತವೆ. ಅಕ್ರಮವಾಗಿ ಸಾಗಣೆ ಮಾಡುವ ಸಂಭವವಿರುತ್ತದೆ. ಹೀಗಾಗಿ ವಾಹನಗಳ ತಪಾಸಣೆ ನಡೆಸಬೇಕು. ತಪಾಸಣೆ ಕಾರ್ಯದ ವಿಡಿಯೋ ಚಿತ್ರೀಕರಣ ಮಾಡಬೇಕು. ಯಾವುದೇ ಸಾಮಗ್ರಿಗಳ ಸಾಗಣೆ ಬಗ್ಗೆ ಸಂಶಯ ಬಂದಲ್ಲಿ ಸಮಗ್ರವಾಗಿ ತಪಾಸಣೆ ನಡೆಸಿ, ಅಕ್ರಮ ಕಂಡುಬಂದಲ್ಲಿ ಕೂಡಲೆ ಕ್ರಮ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.ಈ ಸಂದರ್ಭದಲ್ಲಿ ಇತರೆ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *