ನಾಳೆ ಮೈಸೂರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮೈಸೂರು: ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಹೆಲಿಕಾಪ್ಟರ್ ಬಳಸದೇ ರಸ್ತೆ ಮಾರ್ಗದಲ್ಲೇ ಮೈಸೂರಿಗೆ ತೆರಳಲಿದ್ದಾರೆ.

ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಹೊರಡುವ ಸಿಎಂ ಬೆಳಗ್ಗೆ 10.30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ. ಬೆಳಗ್ಗೆ 11.15ಕ್ಕೆ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಕೋವಿಡ್ ಸಂಬಂಧ ಸಂಸದರು, ಶಾಸಕರು, ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.10ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.15ಕ್ಕೆ ಸುತ್ತೂರು ಮಠದಿಂದ ನಿರ್ಗಮಿಸಲಿದ್ದು ಸಂಜೆ 4.45ಕ್ಕೆ ಬೆಂಗಳೂರು ಆಗಮಿಸಲಿದ್ದಾರೆ.

Leave a Reply

Your email address will not be published. Required fields are marked *