ಬೆಂಗಳೂರು:10 ಆಗಸ್ಟ್ 2021
ನ@ದಿನಿ
ಸರ್ಕಾರಿ ಸಭೆ ಸಮಾರಂಭಗಳಲ್ಲಿ ಇನ್ಮುಂದೆ ಹಾರ-ತುರಾಯಿ ಬಳಕೆ ಮಾಡದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು.ಬದಲಿಗೆ ಕನ್ನಡ ಪುಸ್ತಕ ನೀಡಬೇಕೆಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.