ಮೈಸೂರು:9 ಆಗಸ್ಟ್ 2021
ನ@ದಿನಿ
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು.
ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ,ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರು ಬೊಮ್ಮಾಯಿಗೆ ಸಾಥ್ ನೀಡಿದರು.