ಮೈಸೂರಿನಲ್ಲಿ ಬಸವ ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ನಂದಿನಿ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಆಯೋಜಿಸಿದ್ದ ಬಸವ ಜಯಂತಿಯನ್ನು ಉದ್ಘಾಟಿಸಿದರು.

ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ ಮತ್ತು ಪರಿಸರ ಸಚಿವ ಬಿ.ಈಶ್ವರ ಖಂಡ್ರೆ ಅವರು ವಹಿಸಿದ್ದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು “12ನೇ ಶತಮಾನದ ಶರಣ ದಂಪತಿಗಳು” ಕೃತಿಯನ್ನು ಬಿಡುಗಡೆ ಮಾಡಿದರು.

ಬಸವೇಶ್ವರ ಪುತ್ಥಳಿ ದಾನ ಮಾಡಿದ ನೈಸ್ ಸಂಸ್ಥೆಯ ಮುಖ್ಯಸ್ಥರಾದ ಅಶೋಕ್ ಖೇಣಿ, ಶಾಸಕರುಗಳಾದ ಮಾಜಿ ಸಚಿವ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ದೃವನಾರಾಯಣ್, ಜಿ.ಡಿ.ಹರೀಶ್ ಗೌಡ, ಹೆಚ್.ಎಂ.ಗಣೇಶ್ ಪ್ರಸಾದ್, ಟಿ.ಎಸ್.ಶ್ರೀವತ್ಸ, ವೊಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಿ.ತಿಮ್ಮಯ್ಯ ಸೇರಿ ಮಾಜಿ ಶಾಸಕರು ಹಾಗೂ ನಾಯಕರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *