ನಂದಿನಿ ಮೈಸೂರು
ಬೆಂಗಳೂರು, ಜುಲೈ 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಚೆಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಎಂ.ಸಿ.ಸುಧಾಕರ್, ಲಕ್ಷ್ಮಿ ಹೆಬ್ಬಾಳ್ಕರ್, ಪ್ರಿಯಾಂಕ ಖರ್ಗೆ,ಈಶ್ವರ್ ಖಂಡ್ರೆ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ , ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.