ಮೈಸೂರು:22 ಸೆಪ್ಟೆಂಬರ್ 2022
ನಂದಿನಿ ಮೈಸೂರು
ಬಿಡಿಎ ವಸತಿ ಯೋಜನೆಯಲ್ಲಿ ಅಕ್ರಮ ಟೆಂಡರ್ ಪ್ರಕ್ರಿಯೆಯಲ್ಲಿ 12 ಕೋಟಿ ಲಂಚ ಸ್ವೀಕಾರ ಆರೋಪ ಹೊಂದಿರುವ ಎಸ್.ಟಿ.ಸೋಮಶೇಖರ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಮೈಸೂರು ನಗರ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಮೈಸೂರಿನ ಡಾ.ಅಂಬೇಡ್ಕರ್ ವೃತ್ತದಲ್ಲಿ ಜಮಾಹಿಸಿದ ಪ್ರತಿಭಟನಾಕಾರರು 40% ಬಿಜೆಪಿ ಸರ್ಕಾರ ಎಂದು ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಮಾತನಾಡಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ ಯಡಿಯಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ರವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಸೋಮಶೇಖರ್ ನೇತೃತ್ವದಲ್ಲಿ ದಸರಾ ನಡೆಯುತ್ತಿದೆ.ಲಂಚ ಆರೋಪದಲ್ಲಿರುವ ಸೋಮಶೇಖರ್ ದಸರಾ ಮಹೋತ್ಸವದಲ್ಲಿ ಭಾಗಿಯಾಗಬಾರದು.ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.ಇಲ್ಲವಾದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮೈಸೂರು ನಗರ ಕಾಂಗ್ರೆಸ್ ಸದಸ್ಯರು ಭಾಗಿಯಾಗಿದ್ದರು.