ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್:‌ ಎಂ. ಎಲ್.ರಘುನಾಥ್

ಮೈಸೂರು:25 ಜೂನ್ 2022

ನಂದಿನಿ ಮೈಸೂರು

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ಇಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಚ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಂ. ಎಲ್. ರಘುನಾಥ್ ಅವರು ತಿಳಿಸಿದರು.

ಅವರು ಇಂದು ರಾಷ್ಟ್ರೀಯ ಲೋಕ್ ಅದಾಲತ್ ಪ್ರಯುಕ್ತ ಮಳಲವಾಡಿ ನ್ಯಾಯಾಲಯಗಳ ಸಂಕೀರ್ಣದಲ್ಲಿ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಮಾಧ್ಯಮದವರೊಂದಿಗೆ
ಮಾತನಾಡಿದರು.

ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ 1,50,633ಪ್ರಕರಣಗಳು ಬಾಕಿಯಿದ್ದು ಅವುಗಳ ಪೈಕಿ 59.059 ಸಿವಿಲ್ ಪ್ರಕರಣಗಳು ಹಾಗು 91.574 ಕ್ರಿಮಿನಲ್ ಪ್ರಕರಣಗಳಿದ್ದು, ಸದರಿ ಪ್ರಕರಣಗಳಲ್ಲಿ 70.281 ಇತ್ಯರ್ಥವಾಗುವ ಸಂಭವವಿದ್ದು ಅವುಗಳ ಪೈಕಿ ಈಗಾಗಲೇ 52.695 ಪ್ರಕರಣಗಳನ್ನು ರಾಜಿ ಆಗುವ ಸಾಧ್ಯತೆ ಇರುವ ಪ್ರಕರಣಗಳು ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.

 

Leave a Reply

Your email address will not be published. Required fields are marked *