ಮನೆಗಳಲ್ಲಿ ಕ್ವಾರಂಟೈನ್‌ನಲ್ಲಿರುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಕೋವಿಡ್ ಚಿಕಿತ್ಸಾ ಕಿಟ್ ವಿತರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ

ಮೈಸೂರು:26 ಜನವರಿ 2022

ನಂದಿನಿ ಮೈಸೂರು

*ಕೋವಿಡ್ ನಿಯಂತ್ರಣ ಕುರಿತು ಜಿಲ್ಲೆಯ ಉನ್ನತಾಧಿಕಾರಿಗಳ ಸಭೆ ನಡೆಸಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್*

*ಕೋವಿಡ್ ತೀವ್ರತೆ ಇಳಿಯುವತನಕ ಕಟ್ಟೆಚ್ಚರ*

*ಮನೆಗಳಲ್ಲಿ ಕ್ವಾರಂಟೈನ್‌ನಲ್ಲಿರುವ ಪೊಲೀಸರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಕೋವಿಡ್ ಚಿಕಿತ್ಸಾ ಕಿಟ್ ವಿತರಣೆಗೆ ಸಚಿವರ ಸೂಚನೆ*

ಮೈಸೂರು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಜಿಲ್ಲೆಯ ಉನ್ನತಾಧಿಕಾರಿಗಳ ಸಭೆ ನಡೆಸಿದರು.

ಸೋಂಕಿತರು ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್‌ಗೆ ದಾಖಲಾಗುವ ಪರಿಸ್ಥಿತಿ ಕಡಿಮೆ ಇದೆ. ಹೋಂ ಐಸೋಲೇಷನ್ ಹೆಚ್ಚಿದೆ. ಹೋಂ ಐಸೋಲೇಷನ್‌ನಲ್ಲಿರುವ ಪೊಲೀಸರು, ಶಿಕ್ಷಕರು, ವಿದ್ಯಾರ್ಥಿಗಳಿಗೆ, ಶಾಲೆಗಳಿಗೆ, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರಿಗೂ ಕೋವಿಡ್ ಚಿಕಿತ್ಸಾ ಕಿಟ್‌ಗಳನ್ನು ಕಡ್ಡಾಯವಾಗಿ ತಲುಪಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಕೋವಿಡ್ ಹರಡುವಿಕೆ ಈಗ ಹೆಚ್ಚಾಗಿದೆ. ಈ ಪ್ರಮಾಣ ಕಡಿಮೆಯಾಗುವ ವರೆಗೂ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಬೇಕು. ಯಾವ ಕಾರಣಕ್ಕೂ ನಿರ್ಲಕ್ಷ್ಯವಹಿಸಬಾರದು ಎಂದು ತಿಳಿಸಿದರು.

ಮೈಸೂರಿನಲ್ಲಿ 18846 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 319 ಸೋಂಕಿತರು ಆಸ್ಪತ್ರೆಯಲ್ಲಿ, 224 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ. ಹೋಂ ಐಸೋಲೇಷನ್ ನಲ್ಲಿ 18308 ಇವರೆಲ್ಲರ ಬಗ್ಗೆ ತೀವ್ರ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಳೆದ ಮೂರು ದಿನದಿಂದ ಸರಾಸರಿ 4 ಸಾವಿರ ಕೇಸ್ ಬಂದಿವೆ. ಬ್ಯಾಕ್ ಲಾಕ್ ಆಗಿದ್ದರಿಂದ ಕೇಸ್ ಗಳ ಸಂಖ್ಯೆ ಹೆಚ್ಚಾಗಿದೆ. 7 ಸಾವಿರ ಕೇಸ್ ಬ್ಯಾಕ್ ಲಾಕ್ ಮುಗಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇನ್ನೂ 10 ದಿನ 1500 ರಿಂದ 2000 ಕೇಸ್ ಬರುತ್ತದೆ ಎನ್ನಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್ ಸಿದ್ಧವಾಗಿದೆ. ನಿತ್ಯ 6 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ಲಕ್ಷಣಗಳು ಇರುವವರಿಗೆ ಹಾಗೂ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇರುವವರಿಗೆ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೆಚ್.ಡಿ.ಕೋಟೆಯಲ್ಲಿ ಆಕ್ಸಿಜನ್ ಘಟಕ ಆರಂಭದ ಕುರಿತು ಸಿಎಂ ಜೊತೆ ಚರ್ಚೆಯಾಗಿದೆ. ಶುಕ್ರವಾರ ಆರಂಭವಾಗಲಿದೆ. ಉಳಿದಂತೆ ಎಲ್ಲಾ ತಾಲೂಕುಗಳಲ್ಲಿ ಆಕ್ಸಿಜನ್ ಘಟಕಗಳು ಇವೆ

ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ 319ರ ಜನರ ಪೈಕಿ 30 ಜನಕ್ಕೆ ಲಸಿಕೆ ಆಗಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದರು.

ಗ್ರಾಮೀಣ ಭಾಗದಲ್ಲಿ ಗಂಭೀರ ಸ್ಥಿತಿ ಇಲ್ಲ. ನಗರದಲ್ಲಿ ಪ್ರಕರಣಗಳು ಸ್ವಲ್ಪ ಹೆಚ್ಚಿದೆ. ಶಾಲೆಗಳಿಗೆ ರಜೆ ನೀಡುವ ಕುರಿತು ತಹಸೀಲ್ದಾರ್, ಡಿಡಿಪಿಐ, ಡಿಡಿಪಿಯು, ಡಿಎಚ್ ಒ ಅವರು ನಿರ್ಧಾರ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಎಲ್‌ .ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ, ಅರಣ್ಯ ವಸತಿ ಮತ್ತು ವಿಹಾರಧಾಮ ಅಧ್ಯಕ್ಷರಾದ ಅಪ್ಪಣ್ಣ, ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷರಾದ ಎನ್.ವಿ.ಫಣೀಶ್, ಜಿಲ್ಲಾಧಿಕಾರಿಗಳಾದ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಎ.ಎಂ.ಯೋಗೀಶ್, ಮಹಾನಗರ ಪಾಲಿಕೆ ಆಯುಕ್ತ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *