ನಂದಿನಿ ಮೈಸೂರು
ಡಿ.ದೇವರಾಜ ಅರಸು ಅವರ ಮಾದರಿಯಲ್ಲಿ ಸಿದ್ದರಾಮಯ್ಯ ಅವರು ಆಡಳಿತ ನಡೆಸುತ್ತಿದ್ದಾರೆ ಎಂದು ಬಸವರಾಜ್ ಬಸಪ್ಪ ಶ್ಲಾಘಿಸಿದರು.
ಕೃಷ್ಣರಾಜ ಯುವ ಬಳಗ ಹಾಗೂ ಅಹಿಂದ ಸಂಘಟನೆ ವತಿಯಿಂದ ಎಂ ಜಿ ರಸ್ತೆಯಲ್ಲಿರುವ ನ್ಯಾಯಾಲಯದ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಡಿ. ದೇವರಾಜ ಅರಸು ಅವರ 108ನೇ ಜನ್ಮದಿನದ ಅಂಗವಾಗಿ
ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಮಾತನಾಡಿದರು.
, ‘ದೇಶದ ಪ್ರಧಾನಿ ಹೇಗಿರಬೇಕು ಎನ್ನುವುದಕ್ಕೆ ರಾಜೀವ್ ಗಾಂಧಿಯವರು, ರಾಜ್ಯದ ಮುಖ್ಯಮಂತ್ರಿ ಹೇಗಿರಬೇಕು ಎಂಬುದಕ್ಕೆ ದೇವರಾಜ ಅರಸು ಅವರು ಮಾದರಿಯಾಗಿದ್ದಾರೆ’ ಎಂದು ಹೇಳಿದರು.
ಹಿಂದುಳಿದ ವರ್ಗದ ಜನರ ಆಶಾಕಿರಣ ಹಾಗೂ ರಾಜ್ಯ ಕಂಡ ಶ್ರೇಷ್ಠ ಸಮಾಜ ಸುಧಾರಕರಲ್ಲಿ ದೇವರಾಜ ಆರಸು ಒಬ್ಬರು ಹೇಳಿದರು.
ಇದೇ ಸಂದರ್ಭದಲ್ಲಿ, ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ವರುಣ ಮಹಾದೇವ್, ಹೊಯ್ಸಳ ಟ್ರಸ್ಟ್ ಅಧ್ಯಕ್ಷರಾದ ಎಂ ಪಿ ರಾಜೇಶ್, ಕೃಷ್ಣರಾಜ ಯುವ ಬಳಗದ ಅಧ್ಯಕ್ಷ ನವೀನ್ ಕೆಂಪಿ, ಶ್ರೀಪಾಲ್, ಪವನ್ ಸಿದ್ದರಾಮ, ಮಹದೇವ್, ಯೋಗೇಶ್ ಯಾದವ್, ನಾಗೇಶ್, ಹಾಗೂ ಇನ್ನಿತರರು ಹಾಜರಿದ್ದರು