ದ.ರಾ ಬೇಂದ್ರೆ ಪ್ರಶಸ್ತಿಗೆ ಭಾಜನರಾದ ಯುವ ಪತ್ರಕರ್ತ ನಿತೀನ್

ನಂದಿನಿ ಮೈಸೂರು

ಮೈಸೂರು ಕನ್ನಡ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ದ.ರಾ ಬೇಂದ್ರೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲೆಯ ಯುವ ಪತ್ರಕರ್ತ ನಿತಿನ್ ಅರಸ್ ರವರಿಗೆ ದ.ರಾ ಬೇಂದ್ರೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ನಂತರ ಮಾತನಾಡಿದ ಮೇಯರ್ ಶಿವಕುಮಾರ್  ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನ ಮಾಡಿದ್ದು ನನಗೆ ಖುಷಿಕೊಟ್ಟಿದೆ ಎಂದರಲ್ಲದೇ ಪ್ರಶಸ್ತಿ ಪುರಸ್ಕೃತರಿಗೆ ಶುಭ ಹಾರೈಸಿದರು.

ಪ್ರತಿವರ್ಷ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮೈಸೂರು ಕನ್ನಡ ವೇದಿಕೆಯಿಂದ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುತ್ತದೆ, ಅದೇ ತರಹ ಈ ದಿನ ದ.ರಾ ಬೇಂದ್ರೆ ಪ್ರಶಸ್ತಿ‌ ನೀಡಿರುವುದು ಸಂತಸ ತಂದಿದೆ ಎಂದು ಮೈಸೂರು ಕನ್ನಡ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ತಮ್ಮ ಹರುಷವನ್ನು ಹಂಚಿಕೊಂಡರು.

Leave a Reply

Your email address will not be published. Required fields are marked *