ಬಂದೇ ಬಿಡ್ತು ‘ಡಂಕಿ’ ಟ್ರೇಲರ್…ಹೇಗಿದೆ ಶಾರುಖ್ ಖಾನ್ ಹಾಗೂ ರಾಜ್ ಕುಮಾರ್ ಹಿರಾನಿ ಜೋಡಿಯ ಮೊದಲ ನೋಟ

ನಂದಿನಿ ಮೈಸೂರು

*ಬಂದೇ ಬಿಡ್ತು ‘ಡಂಕಿ’ ಟ್ರೇಲರ್…ಹೇಗಿದೆ ಶಾರುಖ್ ಖಾನ್ ಹಾಗೂ ರಾಜ್ ಕುಮಾರ್ ಹಿರಾನಿ ಜೋಡಿಯ ಮೊದಲ ನೋಟ..?*

ಶಾರುಖ್ ಖಾನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡಂಕಿ ಬಿಡುಗಡೆಗೆ ದಿನಗಣನೆಯಷ್ಟೇ ಬಾಕಿ ಇದೆ. ಕ್ರಿಸ್ಮಸ್ ಗೆ ತೆರೆಗೆ ಬರ್ತಿರುವ ಈ ಚಿತ್ರದ ಮೊದಲ ನೋಟ ರಿಲೀಸ್ ಆಗಿದೆ. ಬ್ಯಾಕ್ ಟು ಬ್ಯಾಕ್ ಮಾಸ್ ಸಿನಿಮಾಗಳಲ್ಲಿ ಅಬ್ಬರಿಸಿದ್ದ ಕಿಂಗ್ ಖಾನ್ ಕ್ಲಾಸ್ ಕಥೆ ಮೂಲಕ ಪ್ರೇಕ್ಷಕರ ಎದುರು ಹಾಜರಾಗ್ತಿದ್ದಾರೆ. ಫನ್-ಎಮೋಷನ್ ಪ್ರೀತಿ ಜೊತೆ ದೇಶಭಕ್ತಿ ಕಥೆ ಹೊತ್ತುಬಂದಿರುವ ಡಂಕಿ ಡ್ರಾಪ್-4 ಅಂದರೆ ಟ್ರೇಲರ್ ಸಖತ್ ಇಂಪ್ರೆಸಿವ್ ಆಗಿದೆ.

3 ನಿಮಿಷ 1 ಸೆಕೆಂಡ್ ಇರುವ ಟ್ರೇಲರ್ ನಲ್ಲಿ ಭರಪೂರ ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶವನ್ನು ನಿರ್ದೇಶಕ ರಾಜ್ ಕುಮಾರ್ ಹಿರಾನಿ ಕಟ್ಟಿಕೊಟ್ಟಿದ್ದಾರೆ. ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಾಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಎಳೆಯಲ್ಲಿ ತೆರೆದಿಟ್ಟಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ ಖಾನ್ , ಮನು ಪಾತ್ರದಲ್ಲಿ ತಾಪ್ಸಿ ಪನ್ನು, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ನಟ ವಿಕ್ಕಿ ಕೌಶಲ್, ಅನಿಲ್ ಗ್ರೋವರ್ ಹೀಗೆ ಹೆಸರಾಂತ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಹಾಗೂ ನಿರ್ದೇಶಕ ರಾಜ್ ಕುಮಾರ್ ಹಿರಾನಿ ‘ಡಂಕಿ’ ಸಿನಿಮಾಗಾಗಿ ಒಂದಾಗಿದ್ದಾರೆ. ಈಗಾಗಲೇ ಡಂಕಿ ಡ್ರಾಪ್ 1ನಡಿ ಟೀಸರ್, ಡ್ರಾಪ್ 2, 3 ಎಂದು ಹಾಡುಗಳು ರಿಲೀಸ್ ಆಗಿದ್ದು, ಈಗ ಡಂಕಿ ಡ್ರಾಪ್ 4 ಟೈಟಲ್ ಅಡಿಯಲ್ಲಿ ಬಿಡುಗಡೆಯಾಗಿರುವ ಟ್ರೇಲರ್ ಗೆ ಅಧ್ಬುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ದೇಶಕ ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ‘ಡಂಕಿ’ಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್‌ 21 ರಂದು ಸಿನಿಮಾ ಬಿಡುಗಡೆ ಆಗಲಿದೆ.

Leave a Reply

Your email address will not be published. Required fields are marked *