ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣಕ್ಕೆ ಚಾಲನೆ ನೀಡಿದ ಸಚಿವರುಗಳು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಗಜಪಯಣಕ್ಕೆ ಚಾಲನೆ ನೀಡಿದ ಸಚಿವರುಗಳು

ನಂದಿನಿ ಮೈಸೂರು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮವಾದ ದಸರಾ ಗಜಪಡೆಯ ಪಯಣಕ್ಕೆ ಇಂದು ಸಾಂಪ್ರದಾಯಕವಾಗಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.

ದಸರಾ ಆನೆಗಳಾದ ಅಭಿಮನ್ಯು, ಭೀಮ, ಲಕ್ಷ್ಮಿ, ವರಲಕ್ಷ್ಮಿ,ಗೋಪಿ,ಧನಂಜಯ್ಯ,ರೋಹಿತ್,ಏಕಲವ್ಯ ಮತ್ತು ಕಂಜನ‌ ಸೇರಿ 9 ಆನೆಗಳ ಗಜಪಡೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರು ಕ್ಯಾಪ್ಟನ್ ಅಭಿಮನ್ಯೂ ನೇತೃತ್ವದ ದಸರಾ ಗಜಪಡೆಗೆ ಪೂಜೆ ನೆರವೇರಿಸಿ ಪುಷ್ಪಾರ್ಚನೆ ಮಾಡಿದರು.ಗಜಪಯಣಕ್ಕೆ ಕಳಶ, ವೀರಗಾಸೆ,ದೇವರ ಕುಣಿತ,ದಕ್ಷಿ ಕನ್ನಡ ನಾಸ್ವರ,ಡೋಲು ಕುಣಿತ ಮತ್ತು ಕಂಸಾಳೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು.

ಇಂದು ಕ್ಯಾಪ್ಟನ್ ಅಭಿಮನ್ಯೂ ನೇತೃತ್ವದ ದಸರಾ ಗಜಪಡೆ ಮೈಸೂರಿಗೆ ಪಯಣ ಬೆಳಸಿದೆ.ಶುಕ್ರವಾರ ಗಜಪಡೆಗಳು ಮೈಸೂರಿನ ಅರಮನೆ ಪ್ರವೇಶಿಸಲಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಆರಂಭವಾಗಿದ್ದು, ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ಆಗಮಿಸಲಿದೆ.

ಬೆಳಗ್ಗೆ 10.20ರಿಂದ 10.45ರೊಳಗಿನ ಶುಭ ಮುಹೂರ್ತದಲ್ಲಿ ಗಜಪಡೆಗೆ ಪುಷ್ಪಾರ್ಚನೆ ನೇರೆವೆರಿದರು.ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿದ್ದು,  ನಂತರ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಬರಲಿವೆ.ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.  ಈ ಬಾರಿ ಅದ್ಧೂರಿಯಾಗಿ ದಸರಾ ಮಹೋತ್ಸವವನ್ನು  ಆಚರಣೆ ಮಾಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಹೇಳಿದ್ದಾರೆ.

ಆ.23 ರಂದು ಮೈಸೂರು ಜಿಲ್ಲಾಢಳಿತದಿಂದ ಅರಮನೆಯ ಜೈ ಮಾರ್ತಾಂಡ ಗೇಟ್ ನಿಂದ ಗಜ ಪಡೆಗೆ ಸ್ವಾಗತಿಸಲಾಗುವುದು.

ಅಕ್ಟೋಬರ್‌ 3 ರಿಂದ 12ರ ವರೆಗೆ ದಸರಾ ಮಹೋತ್ಸವ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗುತ್ತದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯ ವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ  ಪುಷ್ಪಾರ್ಚನೆ ನಡೆಯಲಿದೆ.

ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂಪಾಯಿ ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು.
ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಲಿದೆ.

ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ. ಸುನೀಲ್ ಬೋಸ್,
ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾದು,ರವಿಶಂಕರ್,ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ,ಎಸ್ಪಿ ವಿಷ್ಣುವರ್ಧನ್,ಡಿಸಿಪಿ ಮುತ್ತುರಾಜ್, ಸೇರಿದಂತೆ ಅರಣ್ಯ ಆಧಿಕಾರಿಗಳು,ಸ್ಥಳೀಯ ನಾಯಕರು,ಹಾಡಿಯ ಜನರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *