ಮೈಸೂರು:20 ಡಿಸೆಂಬರ್ 2021
ನಂದಿನಿ
ಪಿರಿಯಾಪಟ್ಟಣದ ವಾರ್ಡ್ ನಂ.10ರಲ್ಲಿ ಮ್ಯಾನ್ ಹೋಲ್ ಸ್ವಚ್ಚತೆಗೆ ಇಳಿದಿದ್ದ ಪೌರಕಾರ್ಮಿಕ ಸಾವನ್ನಪ್ಪಿದ್ದಾನೆ.
ಮ್ಯಾನ್ ಹೋಲ್ ನಲ್ಲಿ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ಪೌರಕಾರ್ಮಿಕರ ಮಧು(27).ರವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಮಧು ಮೃತಪಟ್ಟಿದ್ದಾನೆ.
ಶವವಿಟ್ಟು ಪ್ರತಿಭಟನೆ:
ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಯುತ್ತಿದೆ.ಬಲವಂತವಾಗಿ ಪೌರಕಾರ್ಮಿಕರನ್ನ ಮ್ಯಾನ್ ಹೋಲ್ ಗೆ ಇಳಿಸಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಪೌರಕಾರ್ಮಿಕರ ಸಾವನ್ನಪ್ಪಿದ್ದಾನೆ.ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು.ಮೃತ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.