ದೇವರಾಜ ಅರಸುರವರ ಪ್ರತಿಮೆ ನಿರ್ಮಾಣ ಕಾರ್ಯ ಅನುಷ್ಠಾನಗೊಳಿಸಲು ಕೋರಿ ಮುಖ್ಯಮಂತ್ರಿಗಳಿಗೆ ಮನವಿ

ನಂದಿನಿ ಮೈಸೂರು

ಮೈಸೂರಿನ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ನಿಯೋಗವು ವಿಧಾನ ಪರಿಷತ್ ಸದಸ್ಯರಾದ  ಹೆಚ್.ವಿಶ್ವನಾಥ್ ರವರ
ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ ರವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿತು.

ಹಿಂದುಳಿದ ವರ್ಗಗಳ ಪಾಲಿನ ಮಹಾನ್ ನೇತಾರ,ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ ಪ್ರತಿಮೆ ನಿರ್ಮಾಣ ಮಾಡುವಂತೆ ಕೋರಿ ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡ್ಡಿಯೂರಪ್ಪ ರವರಿಗೆ ಅವರ ಅಧಿಕಾರಾವದಿಯಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಶ್ರೀ ಆರ್.ರಘು ಕೌಟಿಲ್ಯ ಅವರ ನೇತೃತ್ವದಲ್ಲಿ ನಿಯೋಗವು ಮನವಿ ಮಾಡಿತ್ತು ,ಮನವಿಗೆ ಸ್ಪಂದಿಸಿದ ಶ್ರೀ ಯಡ್ಡಿಯೂರಪ್ಪನವರು ಮೈಸೂರು ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜಿಲ್ಲಾ ಮಟ್ಟದ ಕಛೇರಿ ಸಂಕೀರ್ಣ ಮುಂಭಾಗದಲ್ಲಿ ಡಿ.ದೇವರಾಜ ಅರಸು ಅವರ ಪ್ರತಿಮೆ ಪ್ರತಿಷ್ಠಾಪನೆ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳ ಕಾರ್ಯಲಯದಿಂದ ಸೂಚನೆ ನೀಡಿತ್ತು ,ಅದರಂತೆ ಮಾನ್ಯ ಉಸ್ತುವಾರಿ ಸಚಿವರಾದ ಶ್ರೀ ಎಸ್.ಟಿ.ಸೋಮಶೇಖರ್ ರವರು,ಜಿಲ್ಲಾಧಿಕಾರಿಗಳು ಹಾಗೂ ಸಂಸದರಾದ ಪ್ರತಾಪ್ ಸಿಂಹ ರವರು ಸ್ಥಳ ಪರಿಶೀಲಿಸಿ ಪ್ರತಿಮೆ ನಿರ್ಮಾಣ ಮಾಡಲು ಸೂಕ್ತ ಸ್ಥಳವೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು,ಅದರಂತೆ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಕಾರ್ಯಪಾಲಕ ಅಭಿಯಂತರು,ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಮೈಸೂರು ರವರಿಂದ
ದಿ. ಡಿ.ದೇವರಾಜ ಅರಸು ಅವರ ಪ್ರತಿಮೆ ಪ್ರತಿಷ್ಠಾಪನೆ ಸಂಭಂದ ನಕ್ಷೆ ಹಾಗೂ ಅಂದಾಜು ವೆಚ್ಚ ಪಡೆದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಿರುತ್ತಾರೆ ,ಪ್ರತಿಮೆ ಪ್ರತಿಷ್ಠಾಪನೆಗೆ ರೂ.92 ಲಕ್ಷಗಳನ್ನು ಪ್ರತ್ಯೇಕವಾಗಿ ಲೆಕ್ಕ ಶೀರ್ಷಿಕೆ 4225-03-283-0-1 ಆಬ್ಜೆಕ್ಟೀವ್ ಕೋಡ್ 386 ರಡಿಯಲ್ಲಿ ವಿಶೇಷ ಪ್ರಕರಣವಾಗಿ ಪರಿಗಣಿಸಿ ಬಿಡುಗಡೆ ಮಾಡಲು ಕೋರಿ ಪ್ರಸ್ತಾವನೆ ಸಲ್ಲಿಸಿದೆ ,ಆದುದರಿಂದ ರಾಜ್ಯದ ಮುಖ್ಯಮಂತ್ರಿಗಳಾದ ತಾವು ಡಿ.ದೇವರಾಜ ಅರಸು ಪ್ರತಿಮೆ ನಿರ್ಮಾಣ ಕಾರ್ಯ ವನ್ನು ಕೂಡಲೇ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹೆಚ್,ವಿಶ್ವನಾಥ್,ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಅಧ್ಯಕ್ಷ ಜಾಕೀರ್ ಹುಸೇನ್, ಸಮಿತಿಯ ಗೌರವ ಸಲಹೆಗಾರರಾದ ಡಾ.ವೈ.ಡಿ.ರಾಜಣ್ಣ,ಸಮಿತಿಯ ರಾಜ್ಯ ಸಂಚಾಲಕರಾದ ಡೈರಿ ವೆಂಕಟೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *