ನಂದಿನಿ ಮೈಸೂರು
ದೇಶದ ಐದು ಕಡೆಗಳಲ್ಲಿ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಏಕಕಾಲಕ್ಕೆ ಚಾಲನೆ ನೀಡಿದ್ದು, ಧಾರವಾಡದಿಂದ ಬೆಂಗಳೂರಿಗೆ ರಾಜ್ಯದ ಎರಡನೇ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಿದೆ.
ಇದರಿಂದ ಉತ್ತರ ಕರ್ನಾಟಕ ಭಾಗದ ಜನರು ಅತ್ಯಂತ ಕಡಿಮೆ ಅವಧಿಯಲ್ಲಿ ವೇಗವಾಗಿ ಬೆಂಗಳೂರು ತಲುಪಲು ಅನುಕೂಲವಾಗಲಿದೆ. ಉತ್ತರ ಕರ್ನಾಟಕ ಭಾಗದ ಜನತೆಗೆ ಈ ಸೌಲಭ್ಯ ಒದಗಿಸಿಕೊಟ್ಟಿದ್ದಾರೆ.
ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ್ ಜೋಶಿ ಜೊತೆಗಿದ್ದರು.