2021ನೇ ಸಾಲಿನ ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ‌ ಕ್ರೀಡಾಕೂಟ

 

ಮೈಸೂರು:28 ಡಿಸೆಂಬರ್ 2021

ನಂದಿನಿ

2021ನೇ ಸಾಲಿನ ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ‌ ಕ್ರೀಡಾಕೂಟವನ್ನು ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್,ಐಎಎಸ್ ರವರು ಉದ್ಘಾಟನೆ ಮಾಡಿ. ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಸಮಾಜದಲ್ಲಿ ಶಾಂತಿ ನೆಲೆಸಲು,ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧಗಳ ನಿಯಂತ್ರಣ ಮತ್ತು ಅಪರಾಧಿಗಳ ಪತ್ತೆ ಕಾರ್ಯ ಮಾಡಿ ನಾಗರೀಕ ಸಮಾಜದ ನೆಮ್ಮದಿಗೆ ಆರಕ್ಷಕರು ಕಾರಣವಾಗಿದ್ದಾರೆ, ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆ ಅತ್ಯಗತ್ಯ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚೇತನ್.ಆರ್ ರವರು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತಂಡಗಳ ಪರಿಚಯ ಮಾಡಿಕೊಟ್ಟರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ  ಜಿಲ್ಲಾಧಿಕಾರಿಗಳಿಗೆ ನೆನಪಿನ‌ ಕಾಣಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ಆರ್.ಶಿವಕುಮಾರ್ , ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *