ನಂದಿನಿ ಮೈಸೂರು
ಮೈಸೂರಿನ ಡಾ.ವಿಜಯಲಕ್ಷ್ಮಿ ಮನಾಪುರ ಅವರಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಜೀವಮಾನ ಸಾಧನೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಮಹಾರಾಜ ಕಾಲೇಜು ಜಾನಪದ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಜಯಲಕ್ಷ್ಮಿ ಮನಾಪುರ ರವರಿಗೆ ಬೆಂಗಳೂರಿನ
ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅಂಡ್ ಎಕನಾಮಿಕ್ ರಿಫಾರ್ಮ್ಸ್ ಸಂಸ್ಥೆಯಿಂದ ಪ್ರಶಸ್ತಿ ಘೋಷಿಸಲಾಗಿದೆ.
ಬೆಂಗಳೂರಿನ ಎಡಿಎ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಡಾ.ವಿಜಯಲಕ್ಷ್ಮೀ ಮನಾಪುರರವರಿಗರ
ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಜೀವಮಾನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಜನಪದ ಗಾಯಕರೂ, ಕಲಾಪ್ರದರ್ಶಕರಾದ ಡಾ.ವಿಜಯಲಕ್ಷ್ಮೀ ಮನಾಪುರ
ರವರು ರಾಷ್ಟ್ರೀಯ, ಅಂತರಾಷ್ಟ್ರೀಯ ವಿಚಾರಸಂಕಿರಣ, ಸಮ್ಮೇಳನಗಳಲ್ಲಿ ಭಾಗಿಯಾಗಿದ್ದಾರೆ. ಇದುವರೆಗೆ 90ಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಿದ್ದಾರೆ.
ಜಾನಪದ ಕ್ಷೇತ್ರದ ಬೋಧನೆ, ಸಂಶೋಧನೆ, ಜೊತೆಗೆ ಜನಪದ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬೆಳವಣಿಗೆ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.