ನಂದಿನಿ ಮೈಸೂರು
ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಸಿರು ಕ್ರಾಂತಿಕಾರಿ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ. ಬಾಬು ಜಗಜೀವನ್ ರಾಮ್ ಅವರ 116 ನೇ ಜನ್ಮದಿನದ ಪ್ರಯುಕ್ತ ನಗರದ ಬಾಬು ಜಗಜೀವನ್ ರಾಂ ವೃತ್ತದಲ್ಲಿನ ಅವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪರ್ಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ, ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳಾದ ಕೆ ಎಂ ಗಾಯತ್ರಿ, ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಅವರನ್ನು ಒಳಗೊಂಡOತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.