ನಂದಿನಿ ಮೈಸೂರು
ಉನ್ನತ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಆಯೇಷ, ಫರ್ಜಾನಾ, ಡಾ.ಎಚ್.ಕೃಷ್ಣರಾಮ್, ಡಾ.ಫ್ರಾನ್ಸಿಸ್ ಅಸ್ಸಿಸಿ ಅಲೇದ, ವಿ.ಶಿವಕುಮಾರ್, ಕೆ.ಪಿ.ಪಾಟೀಲ್, ಡಾ.ಬೀರಪ್ಪ ಆಯ್ಕೆಯಾಗಿದ್ದಾರೆ.
ವಿಶೇಷವೆಂದರೆ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮೈಸೂರು ತಾಲ್ಲೂಕಿನ ಸಾಲುಂಡಿ ಗ್ರಾಮದ ಡಾ.ಬೀರಪ್ಪ ಅವರು ಆಯ್ಕೆಯಾಗಿದ್ದಾರೆ. ಇವರು ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರ ಸೇವೆಯನ್ನು ಗುರುತಿಸಿ ಉನ್ನತ ಶಿಕ್ಷಣ ಇಲಾಖೆ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಲಾಗಿದೆ.