ನಂದಿನಿ ಮೈಸೂರು
ಸರ್ಕಾರವನ್ನು ಬಿಜೆಪಿಯವರು ಅಸ್ಥಿರಗೊಳಿಸುತ್ತಿದ್ದಾರೆ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆ ಹಾಸ್ಯಸ್ಪದ ಎಂದು ಮೈಸೂರು ಜಿಲ್ಲಾ ಬಿಜೆಪಿ ಸಹ ವಕ್ತಾರ ಡಾ.ಕೆ ವಸಂತ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರದ ನಾಯಕರು ದಿನನಿತ್ಯ ಒಂದೊಂದು ಸುಳ್ಳುಗಳನ್ನು ಹೇಳುತ್ತಲೇ ಇರುತ್ತಾರೆ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಹೇಳಿರುವ ಹೇಳಿಕೆ ಬಿಜೆಪಿಯವರು ಸಿಂಗಾಪುರದಲ್ಲಿ ಆಪರೇಷನ್ ಕಮಲ ಮಾಡಲು ಹೊರಟ್ಟಿದ್ದು ಆ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದ್ದಾರೆ ಎನ್ನುವಂತ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಹೇಳಿರುವುದು ಹಾಸ್ಯಸ್ಪದ ರಾಜ್ಯದ ಜನತೆ ಅಧಿಕಾರ ಕೊಟ್ಟಾಗಲು ಕೂಡ ಜನತೆಯ ಪರವಾಗಿ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು ವಿರೋಧ ಪಕ್ಷಗಳನ್ನು ಹಣೆಯುವ ಕೆಲಸವನ್ನು ಮಾಡುತ್ತಿದ್ದಾರೆ ಸದನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರವನ್ನು ಕಂಡು ಹಿಡಿಯುವ ಬದಲು ವಿರೋಧ ಪಕ್ಷದ ಸದಸ್ಯರನ್ನು ಸದನದಿಂದ ಅಮಾನತ್ತು ಮಾಡುವ ದುಸ್ಸಹಾಸ ಮಾಡಿ ಕಾಟಚಾರಕ್ಕೆ ವಿಧಾನ ಸಭೆಯ ಜಲಾಪ ನಡೆಸಿದ್ದಿರಿ, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ತರಕಾರಿಗಳ ಬೆಲೆ ಏರಿಕೆ ಗಗನಕ್ಕೆ ಏರುತ್ತಿದ್ದರು ಅವುಗಳ ನಿಯಂತ್ರಣ ಮಾಡುವುದನ್ನು ಬಿಟ್ಟು, ಕರೆಂಟ್ ಬಿಲ್, ನೀರಿನ ಬಿಲ್ಲು, ಕಂದಾಯ,ಮುದ್ರಾಂಕ ಶುಲ್ಕ, ಕೆಎಸ್ಆರ್ ಟಿಸಿ ಬಸ್ಸಿನ ದರ,ಸಾರಾಯಿ ದರ ಏರಿಕೆ ಮುಂತಾದವುಗಳನ್ನು ಏರಿಸುವ ಮುಖಾಂತರ ಬಡ ಮಧ್ಯಮ ವರ್ಗದ ಜನರಿಗೆ ಬಿಟ್ಟಿ ಭಾಗ್ಯಗಳನ್ನು ನೀಡುತ್ತೇವೆಂದು ಅವರ ಜೇಬಿನಿಂದಲೇ ಹಣ ತೆಗೆದು ಕೊಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ.
ದಿನೇ ದಿನೇ ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದ್ದು ಈಗಾಗಲೇ ರಾಜ್ಯಾದ್ಯಂತ 26 ಜನರ ಹತ್ಯೆಯಾಗಿದ್ದು 48 ಜನರು ರೈತರು ಪ್ರಾಣವನ್ನು ಕಳೆದುಕೊಂಡಿದ್ದಾರೆ ಹಾಗಾಗಿ ಕೊಟ್ಟ ಕುದುರೆ ಏರದವನು ಶೂರನು ಅಲ್ಲ ವೀರನು ಅಲ್ಲ ಎನ್ನುವ ಸ್ಥಿತಿ ಕಾಂಗ್ರೆಸ್ ಸರ್ಕಾರದಾಗಿದೆ ಈ ರೀತಿಯ ಕ್ಷುಲ್ಲಕ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಜನಸಾಮಾನ್ಯರಿಗೆ ರಾಜ್ಯದ ಜನತೆಗೆ ನೀಡಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಉಪ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗಮನಹರಿಸಲಿ ಎಂದು ಭಾರತೀಯ ಜನತಾ ಪಾರ್ಟಿ ಆಗ್ರಹಿಸುತ್ತದೆ ಎಂದರು.