ನಂದಿನಿ ಮೈಸೂರು
ಮಾನ್ಯ ರಾಷ್ಟ್ರಪತಿ ಗಳಾದ ದ್ರೌಪದಿ ಮುರ್ಮು ಅವರು ತಮಿಳುನಾಡಿನ ಮಧು ಮಲೈಗೆ ತೆೆರಳುವ ಹಿನ್ನೆಲೆಯಲ್ಲಿ ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಚ ನೀಡಿ ಸ್ವಾಗತಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಪಾಲಿಕೆ ಮಹಾಪೌರರಾದ ಶಿವಕುಮಾರ್,ಪ್ರಾದೇಶಿಕ ಆಯುಕ್ತರಾದ ಪ್ರಕಾಶ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪೊಲೀಸ್ ವರಿಷ್ಟಾಧಿಕಾರಿ ಸೀಮಾ ಲಾಟ್ಕರ್ ಇದ್ದರು.