ಸತೀಶ್ ಆರಾಧ್ಯ/ ನಂದಿನಿ ಮೈಸೂರು
ಪಿರಿಯಾಪಟ್ಟಣ ತಾಲ್ಲೂಕಿನಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಕೆ.ಮಹದೇವ್ ಹೇಳಿದರು.
ಪಟ್ಟಣದ ಮಂಜುನಾಥ ಸಮುದಾಯ ಭವನದಲ್ಲಿ ನಡೆದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿನ ಫಲಿತಾಂಶದಲ್ಲಿ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸುತ್ತಿರುವುದು ಸಂತಸದ ವಿಷಯವಾಗಿದೆ, ಶಿಕ್ಷಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಬೃಹತ್ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗುವುದು ಎಂದರು.
ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ಅವರು ಮಾತನಾಡಿ ವಿದ್ಯಾರ್ಥಿಗಳ ಏಳ್ಗೆಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಅಪಾರವಾಗಿದ್ದು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳು ಒಬ್ಬರಿಗಿಂತ ಒಬ್ಬರು ಪ್ರತಿವರ್ಷ ಉತ್ತಮ ಫಲಿತಾಂಶ ಪಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದರು.
ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಕೆ.ಕೆ ಅನಿತ್ ಅವರು ಮಾತನಾಡಿ ಸಂಘಟನೆ ಹಾಗೂ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ತಾಲ್ಲೂಕಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸ್ಥಾಪಿಸಿದ್ದು ಜನಪ್ರತಿನಿಧಿಗಳು ಸಹಕರಿಸುವಂತೆ ಕೋರಿದರು.
ಬಿಇಒ ಬಸವರಾಜು, ಒಕ್ಕೂಟದ ಉಪಾಧ್ಯಕ್ಷ ಜೆ.ಸಿ ನಟರಾಜ್ ಮಾತನಾಡಿದರು, ಉದ್ಘಾಟನೆ ಅಂಗವಾಗಿ ಪುಷ್ಪಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ನಡೆಸಿಕೊಟ್ಟ ಸ್ವಾಗತ ನೃತ್ಯ ಗಮನ ಸೆಳೆಯಿತು.
ಈ ಸಂದರ್ಭ ಪುರಸಭ ಅಧ್ಯಕ್ಷ ಕೆ.ಮಹೇಶ್, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಜೆ ಶಿವರಾಜು, ಒಕ್ಕೂಟದ ಉಪಾಧ್ಯಕ್ಷ ಲಕ್ಷ್ಮೇಗೌಡ, ಕಾರ್ಯದರ್ಶಿ ಎಸ್.ಎಸ್ ಪವನ್ ಕುಮಾರ್, ಖಜಾಂಚಿ ಕೆ.ಎಂ ಗಿರಿಧರ್, ಸಹ ಕಾರ್ಯದರ್ಶಿ ಫಾದರ್ ಶಿನೋಜ್, ನಿರ್ದೇಶಕರಾದ ಕಾಂತರಾಜು, ಫಾದರ್ ಜಾರ್ಜ್, ಮಹೇಶ್ ಸೇರಿದಂತೆ ತಾಲ್ಲೂಕಿನ ವಿವಿಧೆಡೆಯ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಶಿಕ್ಷಕರು ಇದ್ದರು.