ನಂದಿನಿ ಮೈಸೂರು
ಜಿಲ್ಲಾಧಿಕಾರಿಗಳಿಂದ ವಿಧಾನ ಸಭಾ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ಪರಿಶೀಲನೆ
ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮತಗಟ್ಟೆ ಅಧಿಕಾರಿಗಳು ಮತ್ತು ಮೈಕ್ರೋ ಅಬ್ಸರ್ವ್ ರ್ ಗಳಿಗೆ ಅವರು ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರದಿಂದ ಮಸ್ಟರಿಂಗ್ ಕೇಂದ್ರಕ್ಕೆ ಹೋಗಲು ಇಂದು ಬೆಳಿಗ್ಗೆ 6ಗಂಟೆಗೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಸಿಬ್ಬಂದಿ ತೆರಳಲು ಹಾಗೂ ಅಲ್ಲಿಂದ ಬರಲು ಒಟ್ಟು 481 ಕೆ.ಎಸ್.ಆರ್.ಟಿ.ಸಿ. ಬಸ್ 84 ಮ್ಯಾಕ್ಸಿ ಕ್ಯಾಬ್ ಹಾಗೂ 29 ಜೀಪ್ಗಳ ವ್ಯವಸ್ಥೆ ಮಾಡಲಾಗಿದೆ.
ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಮಸ್ಟರಿಂಗ್ ಕೇಂದ್ರಕ್ಕೆ ಇಂದು
ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.