ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಯರಾಮ್

ನಂದಿನಿ ಮೈಸೂರು

*ಮತಗಟ್ಟೆ ಕೇಂದ್ರಕ್ಕೆ ಭೇಟಿ ಹಾಗೂ ಪರಿಶೀಲನೆ*

ಮತದಾರರ ಪಟ್ಟಿ ವೀಕ್ಷಕರಾದ ಎನ್. ಜಯರಾಮ್ ಅವರು ಇಂದು ಕೆ ಆರ್ ನಗರ, ಹುಣಸೂರು, ಹೆಚ್ ಡಿ ಕೋಟೆ, ಚಾಮುಂಡೇಶ್ವರಿ, ಕೃಷ್ಣರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವು ಮತಗಟ್ಟೆಗಳಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಮರಣ ಇವುಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿಗಳು , ಸಹಾಯಕ ಮತದಾರರ ನೋಂದಣಾಧಿಕಾರಿಗಳು , ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾತಹಶೀಲ್ದಾರ್ ಬಿ.ರಾಮ್ ಪ್ರಸಾದ್ ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *