ಮೈಸೂರು:21 ಮೇ 2022
ನಂದಿನಿ ಮೈಸೂರು
ಕರ್ನಾಟಕ ದಕ್ಷಿಣ ವಿಧಾನ ಪರಿಷತ್ ಚುನಾವಣೆಯು ಜೂನ್ 13 ರಂದು ನಡೆಯಲಿದ್ದು ಮತ ಎಣಿಕೆ ಕಾರ್ಯವು ಜೂನ್ 15 ರಂದು ನಗರದ ಪಡುವಾರಳ್ಳಿಯ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಸಲು ತಿರ್ಮಾನಿಸಲಾಗಿದ್ದು ಈ ಸಂಬಂಧ ಭದ್ರತಾ ಕೊಠಡಿ ಹಾಗೂ ಮತ ಎಣಿಕೆಯ ಪೂರ್ವ ಸಿದ್ಧತೆ ಪರಿಶೀಲಿಸಲಾಯಿತು.
ಪ್ರಾದೇಶಿಕ ಆಯುಕ್ತರಾದ ಡಾ.ಸಿ.ಜಿ ಪ್ರಕಾಶ್ ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಬಗಾದಿ ಗೌತಮ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿಗಳು ಉಪಸ್ಥಿರಿದ್ದರು.