ನಂದಿನಿ ಮೈಸೂರು
ಬೆಂಗಳೂರು: ಚುನಾವಣಾ ರಾಜಕೀಯದಿಂದ ಕೆ.ಎಸ್. ಈಶ್ವರಪ್ಪ ನಿವೃತ್ತಿ ಬಯಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ ನೋಡಿ
ನಾನು ಸ್ವ– ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ.
ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.