ನಂದಿನಿ ಮೈಸೂರು
ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಅಂಗವಾಗಿ
ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸ ನಡೆಸಲಾಯಿತು.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದ ವಾಹನ ನಿಲುಗಡೆ ಸ್ಥಳದಲ್ಲಿ
ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು.
ಮೈಸೂರು ದಸರಾದ ಆಕರ್ಷಣೆಯ ವಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಕುಶಾಲತೋಪು ಅಭ್ಯಾಸವನ್ನು ನಡೆಸಲಾಯಿತು.
ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ.ನಾಲ್ಕು ಆನೆಗಳು ಬೆದರಿದವು.ಉಳಿದ ಆನೆಗಳು ಧೈರ್ಯವಾಗಿ ಹೆಜ್ಜೆ ಹಾಕಿ ಪಿರಂಗಿ ಬಳಿಗೆ ತೆರಳಿದವು.ಇನ್ನು ಎರಡು ಬಾರಿ ಅಂದರೆ ಸೆ. 29 ಹಾಗೂ ಅ. 1ರಂದು ಕುಶಾಲ ತೋಪು ಅಭ್ಯಾಸವನ್ನು ನಡೆಸಲಾಗುವುದು.