ಮೈಸೂರು:11 ಡಿಸೆಂಬರ್ 2021
ನಂದಿನಿ
ಎಐಸಿಸಿ ಸೂಚನೆ ಮೇರೆಗೆ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾದ್ಯಂತ ಇಂದು ಸದಸ್ಯತ್ವ ನೋಂದಣಿ ಅಭಿಯಾನ ಆಯೋಜಿಸಿತ್ತು.
ಸ್ವಗ್ರಾಮ, ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯ ಬೂತ್ ನಲ್ಲಿ ಏರ್ಪಡಿಸಿದ್ದ ಅಭಿಯಾನದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಸದಸ್ಯತ್ವ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ಹಳ್ಳಿಗೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಗ್ರಾಮಸ್ಥರು, ಪಕ್ಷದ ಕಾರ್ಯಕರ್ತರು, ಮುಖಂಡರು ಅದ್ದೂರಿ ಸ್ವಾಗತ ಕೋರಿದರು. ಸಿದ್ದರಾಮಯ್ಯ ಅವರನ್ನು ಎತ್ತಿನ ಗಾಡಿಯಲ್ಲಿ ವೇದಿಕೆಗೆ ಕರೆದೊಯ್ದರು.
ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ವಿಜಯಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿವಣ್ಣ ಮತ್ತಿತರರು ಭಾಗವಹಿಸಿದ್ದರು.