ನಂದಿನಿ ಮೈಸೂರು
“ಮಾಜಿ ಸೈನಿಕರಿಗೆ ಶೀಘ್ರದಲ್ಲೇ ಮೂಡದಿಂದ ನಿವೇಶನ ಮಂಜೂರು”: ಮೂಡಾ ಅಧ್ಯಕ್ಷ ಕೆ ಮರಿಗೌಡ’
ಮುಡಾದಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವ ಮಾಜಿ ಸೈನಿಕರಿಗೆ ಶೀಘ್ರದಲ್ಲಿ ನಿವೇಶನ ಮಂಜೂರು ಮಾಡಲಾಗುವುದು ಎಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಮಾಜಿ ಸೈನಿಕರಿಗೆ ಭರವಸೆ ನೀಡಿದರು.
ಕಾರ್ಗಿಲ್ ವಿಜಯೋತ್ಸವದ ರಜತ ಮಹೋತ್ಸವದ ಅಂಗವಾಗಿ ಮೈಸೂರು ಸಶಸ್ತ್ರ ಪಡೆಗಳ ಮಾಜಿ ಸೈನಿಕರು ನಗರದ ಮೆಟ್ರೋಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರತಿಮೆ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕೆ.ಎಂ.ಕಾರ್ಯಪ್ಪನವರ ಪ್ರತಿಮೆ ಪುಷ್ಪಾರ್ಚನೆ ಸಲ್ಲಿಸಿ, ಸಿಹಿ ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ತಮ್ಮ ಪ್ರಾಣವನ್ನು ಲೆಕ್ಕಿಸದೇ ಪ್ರಾಣ ತ್ಯಾಗ ಮಾಡಿರುವ ವೀರ ಯೋಧರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ದೇಶದ ಸಮಗ್ರತೆ ಮತ್ತು ಏಕತೆಗಾಗಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದ ಅವರು, ಮುಡಾದಲ್ಲಿ ನಿವೇಶನ ಪಡೆಯಲು ಸಾಕಷ್ಟು ಮಾಜಿ ಸೈನಿಕರು ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಹೆಚ್ ಕ್ಯಾಟಗರಿಯಲ್ಲಿ ನಿವೇಶನ ಮಂಜೂರು ಮಾಡಲು ಪಟ್ಟಿ ಸಿದ್ದಪಡಿಸಲಾಗಿದೆ ಶೀಘ್ರದಲ್ಲಿಯೇ ಮಂಜೂರು ಮಾಡಲಾಗುತ್ತದೆ ಎಂದರು.
ಈ ವೇಳೆ ಮೈಸೂರು ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಯುದ್ದ ಸ್ಮಾರಕಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಮುಡಾದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಸಂಸ್ಥಾಪಕ ಪಿ.ಕ.ಬಿದ್ದಪ್ಪ, ಉಪಾಧ್ಯಕ್ಷ ನರಸೇಗೌಡ, ಎಸ್.ಆರ್.ರವಿಕುಮಾರ್, ಹೆಚ್.ಎಸ್. ಸುರೇಶ್, ಬಿ.ಎಂ.ಗೋಪಾಲ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದರು.