295 Views
ಮಂಗಳೂರು:28 ಜುಲೈ 2022
ನಂದಿನಿ ಮೈಸೂರು

ಪ್ರವೀಣ್ ನೆಟ್ಟಾರು ಕೊಲೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೆ ರಕ್ತದೊಕುಳಿಯ ಭೀಕರ ಘಟನೆ ನಡೆದಿದೆ.
ಮಂಗಳೂರಿನ ಸುರತ್ಕಲ್ ಎಸ್ ಕೆ ಮೊಬೈಲ್ ಅಂಗಡಿಯ ಬಳಿ ಫಾಜಿಲ್ (23) ಮಂಗಳಪೇಟೆ ಎಂಬುವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ.ಬಟ್ಟೆ ಅಂಗಡಿಯ ಮುಂದೆ ಫಾಜಿಲ್ ಮೇಲೆ ಅಟ್ಯಾಕ್ ಮಾಡಲಾಗಿದೆ.ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗಾಯಾಳು ಫಾಜಿಲ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಘಟನೆಯಿಂದ ಮಂಗಳೂರಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಶನಿವಾರದವರಗೆ 144 ಸಕ್ಷನ್ ಜಾರಿಗೊಳಿಸಿ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.