ಪಿರಿಯಾಪಟ್ಟಣ:13 ಆಗಸ್ಟ್ 2022
ಸತೀಶ್ ಆರಾಧ್ಯ / ನಂದಿನಿ ಮೈಸೂರು
ವಿದ್ಯಾರ್ಥಿ ಜೀವನದಿಂದಲೇ ದೇಶಪ್ರೇಮ ಮೈಗೂಡಿಸಿಕೊಳ್ಳುವಂತೆ ಬೆಟ್ಟದಪುರದ ಡಿಟಿಎಂಎನ್ ವಿದ್ಯಾಸಂಸ್ಥೆ ಅಧ್ಯಕ್ಷ ಚಂದ್ರಶೇಖರ್ ಹೇಳಿದರು.
ತಾಲೂಕಿನ ಬೆಟ್ಟದಪುರದ ಡಿಟಿಎಂಎನ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ನರ್ಸರಿ ವಿದ್ಯಾರ್ಥಿಗಳಿಗೆ ನಡೆದ ಛದ್ಮವೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ದೇಶದ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ ಮಹನೀಯರ ಜೀವನ ಆದರ್ಶಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಬಾಳುವಂತೆ ಕರೆ ನೀಡಿದರು.
ಈ ವೇಳೆ ಪುಟಾಣಿಗಳು ಮೈಸೂರು ಮಹಾರಾಜ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಭಗತ್ ಸಿಂಗ್, ಗಾಂಧೀಜಿ, ನೆಹರು, ಸುಭಾಷ್ ಚಂದ್ರ ಬೋಸ್, ಶ್ರೀಕೃಷ್ಣ, ರಾಧೆ, ಸೈನಿಕ, ಪೋಲಿಸ್ ಸೇರಿದಂತೆ ಹೆಣ್ಣು ಸಂತತಿ ಉಳಿಸುವ ವಿವಿಧ ಛದ್ಮವೇಷ ಧರಿಸಿ ಗಮನ ಸೆಳೆದರು.
ಈ ಸಂದರ್ಭ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಜರೀನಾ ಖಾನಮ್, ಪ್ರೌಢಶಾಲಾ ಮುಖ್ಯಶಿಕ್ಷಕ ಮುರಳಿ ಕೃಷ್ಣ, ನರ್ಸರಿ ಶಿಕ್ಷಕಿಯರಾದ ಭಾಗ್ಯ, ವತ್ಸಲಾ, ಅಂಜುಮ್, ಸರಿತಾ, ಆಡಳಿತಾಧಿಕಾರಿ ಜೆ.ಸಿ ನಟರಾಜ್, ನಿರ್ದೇಶಕರಾದ ವಿಜಯ್ ಕುಮಾರ್ ಮತ್ತು ಶಿಕ್ಷಕರು ಸಿಬ್ಬಂದಿ ಇದ್ದರು.