ನಂದಿನಿ ಮೈಸೂರು
ಗೌರಿ ಗಣೇಶ ಹಬ್ಬದ ಪ್ರಯುಕ್ತ
ಮಹಾಜನ ಪ್ರೌಢಶಾಲೆಯಲ್ಲಿ ಶ್ರೀ ವಿದ್ಯಾಗಣಪತಿಗೆ ಮಹಾಮಂಗಳಾರತಿ ಸಮಾರಂಭ ಏರ್ಪಡಿಸಲಾಗಿತ್ತು.
ಮೈಸೂರಿನ ಜಯಲಕ್ಷಿಪುರಂನಲ್ಲಿರುವ ಶಾಲೆಯ ಸಭಾಂಗಣದಲ್ಲಿ ಗೌರಿ ಗಣೇಶನವನ್ನು ಪ್ರತಿಷ್ಠಾನ ಮಾಡಿದ್ದು ಶ್ರೀರಾಮಕೃಷ್ಣ ವಿದ್ಯಾಶಾಲೆಯ ಶ್ರೀ ಸ್ವಾಮಿ ಅಫಹರಾನಂದಜ ರವರು, ಕೆಪಿಸಿಸಿ ಅಸಂಘಟಿತ ವಿಭಾಗದ ರಾಜ್ಯ ಕಾರ್ಯದರ್ಶಿ ಶ್ರೀಪಾಲ್ ಸೇರಿದಂತೆ ಗಣ್ಯರೂ ಗೌರಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಇದೇ ಸಂದರ್ಭ ಸ್ಪರ್ಧೇಯಲ್ಲಿ ಭಾಗವಹಿಸಿ ವಿಜಯಶಾಲಿಯಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಶ್ರೀ ರಾಮಕೃಷ್ಣ ವಿದ್ಯಾಶಾಲಾ ಸ್ವಾಮೀಗಳು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು.ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುಜಾತ ಸೇರಿದಂತೆ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.