ಮೈಸೂರು:31 ಆಗಸ್ಟ್ 2021
ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂದು ಆಗ್ರಹಿಸಿದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದದಾರೆ
‘ಸರ್ಕಾರ ಪಬ್, ಮದ್ಯದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಚರ್ಚ್ ಮತ್ತು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದೆ. ಆದರೆ, ಹಿಂದೂಗಳ ಹಬ್ಬ, ಜಾತ್ರೆಗಳಿಗೆ ಮಾತ್ರ ಕೋವಿಡ್ ನೆಪ ಹೇಳಿ ಆಚರಣೆಗೆ ಅನುಮತಿಸುತ್ತಿಲ್ಲ. ಇದು ಸರ್ಕಾರ ಹಿಂದೂಗಳಿಗೆ ಮಾಡುತ್ತಿರುವ ದ್ರೋಹ. ಸರ್ಕಾರ ಕೂಡಲೇ ಅನುಮತಿ ನೀಡಬೇಕು’ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
‘ಜನಾಶೀರ್ವಾದ ರಾಜಕೀಯ ಕಾರ್ಯಕ್ರಮಕ್ಕೆ ಮತ್ತು ಶಾಲಾ-ಕಾಲೇಜುಗಳು ಆರಂಭಕ್ಕೆ ಇರದ ನಿರ್ಬಂಧ ಗಣಪತಿ ಹಬ್ಬಕ್ಕೆ ಯಾಕೆ ವಿಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೋವಿಡ್ ನಿಯಮ ಪಾಲಿಸಿ ಹೇಗೆ ಮಾಲ್, ಚಿತ್ರಮಂದಿರ, ಚುನಾವಣೆ, ರಾಜಕೀಯ ಸಮಾವೇಶ ಮುಂತಾದವುಗಳು ನಡೆಯುತ್ತಿವೆಯೋ ಅದೇ ರೀತಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕು‘ ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.
–ವಿಕ್ರಂ ಅಯ್ಯಂಗಾರ್
ಸಾಮಾಜಿಕ ಹೋರಾಟಗಾರರು ಹಾಗೂ ಅಧ್ಯಕ್ಷರು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್