ಮೈಸೂರು:9 ಅಕ್ಟೋಬರ್ 2021
ನ@ದಿನಿ
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗಷ್ಟೇ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದ ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಆಶಾ ಎಂಬಾಕೆಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆಯಾಗಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಡೇನಹಳ್ಳಿಯ ಆಶಾ ಎಂಬಾಕೆ ಮಳವಳ್ಳಿಯ ನಾಗಾಪ್ರಸಾದ್ ಎಂಬಾತನನ್ನು ಪ್ರೀತಿಸಿ ಕಳೆದ ಎಂಟು ವರ್ಷದ ಹಿಂದೆ ಮದುವೆಯಾಗಿದ್ದಳು.
ಸದ್ಯ ಮೈಸೂರಿನ ಜೆ.ಪಿ.ನಗರದಲ್ಲಿ ಗಂಡನೊಂದಿಗೆ ವಾಸವಾಗಿದ್ದಳು. ತವರು ಮನೆಯಿಂದ ಹಣ ತರುವಂತೆ ಗಂಡನಿಂದ ನಿರಂತರ ಕಿರುಕುಳವಾಗುತ್ತಿತ್ತು.ಈ ಬಗ್ಗೆ ಎರಡು ಬಾರಿ ಪೋಲಿಸ್ ಸ್ಟೇಷನ್ ನಲ್ಲಿ ದೂರು ದಾಖಲಾಗಿತ್ತು.
ಆಶಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಾಗಾಪ್ರಸಾದ್ ತವರು ಮನೆಗೆ ಫೋನ್ ಮಾಡಿ ಹೇಳಿದ್ದನು.
ತರುವಾಯ ಸ್ಥಳಕ್ಕೆ ಬಂದ ಆಶಾ ತವರು ಮನೆಯವರು, ಇದು ಆತ್ಮಹತ್ಯೆಯಲ್ಲಿ ನಾಗಾ ಪ್ರಸಾದ್ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.ಈ ಸಂಬಂಧ ಮೈಸೂರಿನ ವಿದ್ಯಾರಣ್ಯಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.