ಅತಿಥಿ ಉಪನ್ಯಾಸಕರ ಪರಿಷ್ಕೃತ ಆದೇಶ ಪರಿಷ್ಕೃತ ಸಂಭಾವನೆ ಹಾಗೂ ಇತರೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ನಂದಿನಿ ಮೈಸೂರು

ಮೈಸೂರು ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ಸಕ್ರಿಯ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಪರಿಷ್ಕೃತ ಆದೇಶ ಪರಿಷ್ಕೃತ ಸಂಭಾವನೆ ಹಾಗೂ ಇತರೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ತರಗತಿಯಲ್ಲಿ ಉಪನ್ಯಾಸ ಬಹಿಷ್ಕಾರಿಸಿ
ಮೈಸೂರಿನ ವಿಶ್ವವಿದ್ಯಾಲದ ಮುಂಭಾಗ ಜಮಾಹಿಸಿದ ಅತಿಥಿ ಉಪನ್ಯಾಸಕರು ಶೈಕ್ಷಣಿಕ ವ್ಯವಸ್ಥೆ ಹಾಗೂ ಆಡಳಿತ ವಿರುದ್ದ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಮಾತನಾಡಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಯುಜಿಸಿ ಮಾನದಂಡದಂತೆ ಎಲ್ಲಾ ಅರ್ಹತೆಗಳನ್ನು ಹೊಂದಿ ವಿವಿಧ ಅಧ್ಯಯನ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಕಳೆದ 25 ವರ್ಷಗಳಿಂದ ಸುಮಾರು 900ಕ್ಕೂ ಹೆಚ್ಚು ಮಂದಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.ಸಂಭಾವನೆ ಪರಿಸ್ಕರಿಸಲು ಸಿಂಡಿಕೇಟ್ ಸಭೆ ಅನುಮೋದಿಸಿತು.ಈ ಹಿನ್ನೆಲೆ ಪರಿಸ್ಕೃತ ವೇತನ ನೀಡುವಂತೆ ಹಲವಾರು ಬಾರಿ ಕುಲಪತಿ ಮತ್ತು ಕುಲಸಚಿವರಿಗೆ ಮನವಿ ಸಲ್ಲಿಸಿದರೂ ಕೂಡ ಸಬೂಬು ಹೇಳುತ್ತಿದ್ದಾರೆ.ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲವಾದ್ದಲ್ಲಿ ಅನಿರ್ದಿಷ್ಟ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ 100 ಕ್ಕೂ ಹೆಚ್ಚು ಮಂದಿ ಅತಿಥಿ ಉಪನ್ಯಾಸಕರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *