ನಂದಿನಿ ಮೈಸೂರು
ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಮಾರ್ಚ್ 5ರವರಗೆ ನಡೆಯಲಿರುವ ಗುಜರಾತ್ ಹ್ಯಾಂಡಿ ಕ್ರಾಫ್ಟ್ ಉತ್ಸವ-2023 ಉದ್ಘಾಟನೆಗೊಂಡಿದೆ.
ಜೆಎಸ್ ಎಸ್ ಮಹಾವಿದ್ಯಾಪೀಠದ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಸತತವಾಗಿ 8ನೇ ಬಾರಿ ವಿಶೇಷವಾಗಿ ಭಾರತ ದೇಶದ ಪ್ರಾಂತೀಯ ಮೇಳ ಆಯೋಜನೆಗೊಂಡಿದ್ದು
ಮೈಸೂರು ಜಿಲ್ಲೆಯ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ. ಗಾಯತ್ರಿ ಮತ್ತು ಮೈಸೂರು ಜಿಲ್ಲೆಯ ಪೊಲೀಸ್ ಅಧೀಕ್ಷರಾದ ಸೀಮಾ ಲಟ್ಕರ್ ಅವರು ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಗುಜರಾತ್ ರಾಜ್ಯದ ವಿವಿಧ ಭಾಗಗಳ ಪ್ರಸಿದ್ಧ ಹಾಗೂ ಕ್ರೀಯಾಶೀಲರಾಗಿರುವ ಸುಮಾರು 60ಕ್ಕೂ ಹೆಚ್ಚು ಕುಶಲಕರ್ಮಿಗಳು ಮೇಳದಲ್ಲಿ ಭಾಗವಹಿಸಿದ್ದಾರೆ. ಕುಶಲಕರ್ಮಿಗಳು ತಯಾರಿಸಿದ ಪಟೇಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್ ಶೀಟ್‌ಗಳು, ಟವಲ್‌ಗಳು, ಕುಶನ್ ಕವರ್‌ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್ ಮೆಟೀರಿಯಲ್‌ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಬೀಡ್ ವರ್ಕ್, ಮೆಟಲ್ ವರ್ಕ್, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣಿಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.ಪ್ರವೇಶ ಉಚಿತವಾಗಿದೆ.
ಇದೆ ಸಂಧರ್ಭದಲ್ಲಿ
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿಗಳಾದ ಡಾ.ಸಿ.ಜಿ. ಬೆಟಸೂರಮಠ್ , ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿಗಳಾದ ಶ್ರೀ.ಎಸ್. ಶಿವಕುಮಾರಸ್ವಾಮಿಗಳು, ಜೆಎಸ್‌ಎಸ್ ಮಹಾವಿದ್ಯಾಪೀಠದ ಹಣಕಾಸು ವಿಭಾಗದ ನಿರ್ದೇಶಕರಾದ ಶ್ರೀ.ಎಸ್.ಪುಟ್ಟಸುಬ್ಬಪ್ಪ ರವರು.ಬಿಎಸ್‌ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ.ಬಿ. ಸುರೇಶ್‌ರವರು, ಜೆಎಸ್‌ಎಸ್ ಮಹಾವಿದ್ಯಾಪೀಠದ ಸಾಮಾನ್ಯ ಅಭಿವೃದ್ಧಿ ವಿಭಾಗದ ಪ್ರಭಾರ ನಿರ್ದೇಶಕರಾದ ಕೆ.ಎಲ್. ರೇವಣ್ಣ ಸ್ವಾಮಿರವರು, ಡಾ. ಹೆಚ್.ಆರ್. ಮಹದೇವಸ್ವಾಮಿ, ಜಂಟಿ ನಿರ್ದೇಶಕರು, ತಾಂತ್ರಿಕ ಶಿಕ್ಷಣ ವಿಭಾಗ, ಜೆಎಸ್‌ಎಸ್ ಮಹಾವಿದ್ಯಾಪೀಠ ಮತ್ತು ಶ್ರೀ.ಬ್ರಿಜೇಶ್ ದಾವೆ, ಶಿವನಂಜಸ್ವಾಮೀ, ಸುಂದರಪ್ಪ
ಸೇರಿದಂತೆ ಹಲವರು ಉಪಸ್ಥಿತರಿದ್ದರು.