ನಂದಿನಿ ಮೈಸೂರು
80 ಲಕ್ಷ ರೂಗಳ ವೆಚ್ಚದಲ್ಲಿ ಹಡಜನ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ
ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಡಜನ ಗ್ರಾಮದ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾಕ್ಟರ್ ಯತಿಂದ್ರ ಸಿದ್ದರಾಮಯ್ಯ ನವರು ಭೂಮಿ ಪೂಜೆ ನೆರವೇರಿಸಿದರು.
ಇದೇ ವೇಳೆ ಗ್ರಾಮಸ್ಥರು ಗ್ರಾಮದಲ್ಲಿ ಸ್ಮಶಾನ ಅಭಿವೃದ್ಧಿ ಕೆರೆ ಹೊತ್ತುವರಿ ತೆರವು ಗೊಳಿಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಅವರ ಮನವಿಗೆ ಸ್ಪಂದಿಸಿ ಮಾತನಾಡಿದ ಶಾಸಕರು ಈಗಾಗಲೇ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಈಗ ಗ್ರಾಮದ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 80 ಲಕ್ಷ ರೂಗಳ ವೆಚ್ಚದಲ್ಲಿ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡು ಭೂಮಿ ಪೂಜೆ ನೆರಸಲಾಗಿದ್ದು ಆದಷ್ಟು ಬೇಗನೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ ಅವರು ಇನ್ನುಳಿದ ಸಣ್ಣಪುಟ್ಟ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುತ್ತೇನೆ ಎಂದು ತಿಳಿಸಿದ ಅವರು ಹಡಜನ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ಇದೇ ವೇಳೆ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು ಶಾಸಕರು ಸ್ಥಳದಲ್ಲಿದ್ದ ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ್ ಅವರ ಜೊತೆ ಮಾತನಾಡಿ ಗ್ರಾಮದ ಸುತ್ತಮುತ್ತ ಎಲ್ಲೆಲ್ಲಿ ದೊಡ್ಡ ದೊಡ್ಡ ಮರಗಳ ಗುಂಪಿದೆಯೋ ಆ ಗುಂಪುಗಳನ್ನು ತೆರವುಗೊಳಿಸಿ ಚಿರತೆಯನ್ನು ಸೆರೆ ಹಿಡಿಯಲು ಚಿರತೆಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ನೀವು ಸಹ ಹೆಚ್ಚು ಗಮನಹರಿಸಿ ಎಂದು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆಶಾಸಕ ಡಾಕ್ಟರ್ ಯತಿಂದ್ರ ಸಿದ್ರಾಮಯ್ಯನವರು ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುಳಾ ಮಂಜುನಾಥ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಂಜು, ಗ್ರಾಮದ ಮುಖಂಡರಾದ ಪಿ ಶಿವಣ್ಣ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ನಂಜಪ್ಪ, ನಾಗರಾಜು, ಸ್ವಾಮಿ, ಚೆನ್ನಾಜಮ್ಮ, ಕನಕ ಮೂರ್ತಿ ಪಿಡಿಒ ಚಂದ್ರಕಾಂತ್ ಮೂಢಧಿಕಾರಿಗಳಾದ ಎಂ ಎನ್ ಯಾದಗಿರಿ ಪರಮೇಶ್ ಗುತ್ತಿಗೆದಾರ ಎಂ ಎಸ್ ರೇವಣ್ಣ ಹಾಗೂ ಗ್ರಾಮದ ಮುಖಂಡರು ಪಕ್ಷದ ಕಾರ್ಯಕರ್ತರು ಹಾಜರಿದ್ದರು.