ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಹನಗೋಡು:4 ಜೂನ್ 2022

ಯುವ ಜನತೆ ದೇಶದ ಶಕ್ತಿಯಾಗಿದ್ದು, ಒಳ್ಳೆಯ ಮಾರ್ಗದರ್ಶನದಲ್ಲಿ ವಿದ್ಯಾ ವಂತರಾದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪಿ ಕೆ ರಮೇಶ್ ಹೇಳಿದರು.

ಅರಸು ಕಲ್ಲಹಳ್ಳಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮೈಸೂರು ಜಿಲ್ಲಾ ಜನಜಾಗೃತಿ ವೇದಿಕೆ ಸಂಯುಕ್ತಾಶ್ರಯ ದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರದೊಂದಿಗೆ ನಾಗರಿಕರು ಕೈ ಜೋಡಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದ್ದು, ಹಿರಿಯರ ಮಾರ್ಗದರ್ಶನದಲ್ಲಿ ಯುವ ಜನತೆ ಸಾಗಿದಾಗ ಸಂಸ್ಕಾರಯುತ ಸುಭಿಕ್ಷ ನಾಡು ನಿರ್ಮಾಣವಾಗುತ್ತದೆ ಎಂದ ಅವರು, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ಹಾದಿ ತಪ್ಪುತ್ತಿರುವ ಯುವ ಜನತೆ ಜಾಗೃತರಾಗಿ ಒಳ್ಳೆಯ ಆಲೋಚನೆ ಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ದಾ ರಾ ಮಹೇಶ್ ಮಾತನಾಡಿ ವಿದ್ಯಾರ್ಥಿಗಳು ಮಾನಸಿಕ ವಾಗಿ ಮತ್ತು ದೈಹಿಕವಾಗಿ ಸದೃಢರಾದಾಗ ಮಾತ್ರ ಕಲಿಕೆಯತ್ತ ಆಸಕ್ತಿ ವಹಿಸಬಹುದು ಎಂದು ಸಲಹೆ ನೀಡಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪನ್ಮೂಲ ವ್ಯಕ್ತಿ ಸೋಮಶೇಖರ್ ಮಾತನಾಡಿ. ಹಲವು ವ್ಯಸನಗಳಿಂದ ಕುಟುಂಬ ನಿರ್ವಹಣೆ ‌ಸರಿಯಿಲ್ಲಾದೆ ಎಷ್ಟೋ ಕುಟುಂಬಗಳು ತುಂಬಾ ಅದೋಗತಿಗೆ‌ ಹೋಗಿವೆ ಅದನ್ನು ಸರಿಪಡಿಸಲು ಮಕ್ಕಳು ಮುಂದೆ ನಿಂತು ಅದನ್ನು ವಿರೋಧಿಸಿ ನೀವುಗಳು ಉತ್ತಮ ವಿದ್ಯಾರ್ಥಿಗಳಾಗಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು .

ಈ ಸಮಾರಂಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ರವಿಶಂಕರ್ ಮೇಲ್ವಿಚಾರಕಿ ಸವಿತಾ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ ಕಲ್ಲಹಳ್ಳಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ತಾರಾ ಗ್ರಾಂ ಪಂ ಸದಸ್ಯೆ ಸವಿತ ಮಾಜಿ ಸದಸ್ಯ ರವಿ ಸೇವ ಒಕ್ಕೂಟದ ಪ್ರತಿನಿಧಿಗಳಾದ ಮನು ಸುಮಾ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *