ಹಾಯ್ ನನ್ನಾ’ ಸಿನಿಮಾದ ಎರಡನೇ ಹಾಡು ರಿಲೀಸ್…ನ್ಯಾಚುರಲ್ ಸ್ಟಾರ್ ನಾನಿಗೆ ಕಿಚ್ಚ ಸುದೀಪ್ ಸಾ

ನಂದಿನಿ ಮೈಸೂರು

*’ಹಾಯ್ ನನ್ನಾ’ ಸಿನಿಮಾದ ಎರಡನೇ ಹಾಡು ರಿಲೀಸ್…ನ್ಯಾಚುರಲ್ ಸ್ಟಾರ್ ನಾನಿಗೆ ಕಿಚ್ಚ ಸುದೀಪ್ ಸಾಥ್*

ದಸರಾ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ ನಟಿಸುತ್ತಿರುವ 30ನೇ ಸಿನಿಮಾ ಹಾಯ್ ನನ್ನಾ. ಟೀಸರ್ ಹಾಗೂ ಒಂದು ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಹಾಯ್ ನನ್ನಾ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ವಿವರಣೆ ಬೇಕಿಲ್ಲ ಎಂಬ ಹಾಡು ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಮಗಳಲ್ಲ ನೀ ನನ್ನ ಅಮ್ಮ ಎಂಬ ಕನ್ನಡದ ಹಾಡನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿ ನಾನಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.

ಮಗಳಲ್ಲ ನೀ ನನ್ನ ಅಮ್ಮ ಹಾಡು ಅಪ್ಪ ಮಗಳ ನಡುವಿನ ಬಾಂಧವ್ಯದ ಗೀತೆಯಾಗಿದೆ. ಅಪ್ಪನಾಗಿ ನಾನಿ ಹಾಗೂ ಮಗಳಾಗಿ ಬೇಬಿ ಕಿಯಾರಾ ಖಾನ್ ನಟಿಸಿದ್ದಾರೆ. ಕವಿರಾಜ್ ಸಾಹಿತ್ಯ ಬರೆದಿರುವ ಹಾಡಿಗೆ ಹೃದಯ್ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಹಾಡಿಗೆ ಟ್ಯೂನ್ ಹಾಕಿ ಹಾಡಿಗೆ ಧ್ವನಿಯಾಗಿದ್ದಾರೆ.

ಹಾಯ್ ನಾನ್ನ ಸಿನಿಮಾಗೆ ಯುವ ನಿರ್ದೇಶಕ ಶೌರ್ಯುವ್ ಆಕ್ಷನ್ ಕಟ್ ಹೇಳಿದ್ದು, ನಿರ್ದೇಶಕನಾಗಿ ಇದು ಇವರ ಮೊದಲ ಚಿತ್ರವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂಧವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ.

ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.

Leave a Reply

Your email address will not be published. Required fields are marked *