ಮೈಸೂರು:28 ಸೆಪ್ಟೆಂಬರ್ 2021
ನ@ದಿನಿ
ಹಿಂದುಳಿದ ವರ್ಗಗಳ ಜಾತಿ ಜನಗಣತಿ ಮಾಡಲು ಕೇಂದ್ರ ಸರ್ಕಾರ ವಿರೋಧಿಸಿ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಅಂಚೆ ಚಳವಳಿ ನಡೆಸಲಾಯಿತು.
ಮೈಸೂರು ಮಹಾನಗರ ಪಾಲಿಕೆ ಕಚೇರಿ ಬಳಿ ಅಂಚೆ ಪೆಟ್ಟಿಗೆಗೆ ಅಂಚೆ ಹಾಕುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್ ಶಿವರಾಮು ಮಾತನಾಡಿ ಹಿಂದುಳಿದ ವರ್ಗಗಳ ಜಾತಿ ಜನಗಣತಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಅಫಿಡೆವಿಟ್ ಸಲ್ಲಿಕೆ ಮಾಡಲಾಗಿದೆ.ಕೇಂದ್ರ ಸರ್ಕಾರದ ಈ ಧೋರಣೆಯಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿದೆ.
ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಹಿಂದುಳಿದ ವರ್ಗಗಳ ಬಗ್ಗೆ ಅಸಡ್ಡೆ ತೋರಿದ್ದಾರೆ. ಹಿಂದುಳಿದ ವರ್ಗಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರ ೨೦೧೫ ರ ಜಾತಿ ಜನಗಣತಿ ವರದಿಯನ್ನ ಬಿಡುಗಡೆ ಮಾಡಬೇಕು.
ಇಲ್ಲವಾದರೇ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ
ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.