ಸರಗೂರು:23 ನವೆಂಬರ್ 2021
ನಂದಿನಿ
ಸರಗೂರು ಪಟ್ಟಣದ ಜೆ ಎಸ್ ಎಸ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಯಲ್ಲಿ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗುವುದರ ಮೂಲಕ ತಾಲೂಕು ದಂಡಾಧಿಕಾರಿಗಳಾದ ಚಲುವರಾಜು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಕ್ಕಳಿಗೆ ಜಂತುಹುಳು ಬಗ್ಗೆ ತಿಳಿಸಿಕೊಡಲಾಯಿತು.
ಇದೇ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಧಿಕಾರಿ ಗಳಾದ ಡಾ”ಟಿ.ರವಿಕುಮಾರ್ , ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಕಾಂತ್, ಅಕ್ಷರ ದಾಸೋಹ ಸಹ ನಿರ್ದೇಶಕರಾದ, ಸಿದ್ದರಾಜು ಶಾಲೆ ಪಟ್ಟಣ ಪಂಚಾಯಿತಿ ಅಧಿಕಾರಿಗಳಾದ ಸತೀಶ್, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ”ಪಾರ್ಥಿ ಸಾರತಿ, ಮುಖ್ಯೋಪಾಧ್ಯಾಯರಾದ ಮಹಮದ್ ಅಂಜು ಪಾಷ್, ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಆರೋಗ್ಯ ನಿರೀಕ್ಷಕರಾದ ರವಿರಾಜ್, ಆರೋಗ್ಯ ಸುರಕ್ಷಾ ಅಧಿಕಾರಿಯಾದ ಇಂದಿರಾ ಶಾಲೆಯ ಸಹ ಶಿಕ್ಷಕರು ಮತ್ತು ಮಕ್ಕಳು ಹಾಜರಾಗಿದ್ದರು.