ನಂದಿನಿ ಮೈಸೂರು
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಿ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ದಿನಾಂಕ 08.07.2023 ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಜಿಎಸ್ ಸಂಗ್ರೇಶಿ ತಿಳಿಸಿದರು.
ಜಯನಗರದಲ್ಲಿರುವ
ಮಳಲವಾಡಿ ನ್ಯಾಯಾಲಯಗಳ ಸಂಕೀರ್ಣ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಮೈಸೂರು ನಗರ ಮತ್ತು ಶಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,11,029 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 54,096 ಸಿವಿಲ್ ಪ್ರಕರಣಗಳು ಹಾಗೂ 57,833 ಕ್ರಿಮಿನಲ್ ಪ್ರರಗಳಿದ್ದು, ಪ್ರಸ್ತುತ ಸದರಿ ಪ್ರಕರಣಗಳಲ್ಲಿ ಇವರೆಗೂ 11, 702 ಇತ್ಯರ್ಥವಾಗುವ ಸಂಭವವಿದ್ದು, ಅವುಗಳ ಪೈಕಿ ಈಗಾಗಲೇ 7,516 ಪ್ರಕರಣಗಳನ್ನು ರಾಜಿ ಆಗುವ ಸಾಧ್ಯತೆ ಇರುವ ಪ್ರಕರಣಗಳು ಎಂದು ಗುರುತಿಸಲಾಗಿದೆ.
1. ಮೋಟಾರು ವಾಹನ ಅಪಘಾತ ಪ್ರಕರಣಗಳು:405
2. ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು:236
3. 138 ಎನ್.ಐ. ಆಕ್ಟ್ (ಚೆಕ್ ಬೌನ್ಸ್) ಒಟ್ಟು 22,649 ಪ್ರಕರಣಗಳಿದ್ದು, ಅವುಗಳ ಪೈಕಿ ಅಂದಾಜು:2,410
4. ರಾಜಿಯಾಗಬಹುದಾದ ಸಿವಿಲ್ ಹಾಗೂ ಇತರೆ ಕ್ರಿಮಿನಲ್ ಪ್ರಕರಣಗಳು – 4,203
ವ್ಯಾಜ ಪೂರ್ವ ಪ್ರಕರಣಗಳು
4. ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವಂತಹ ಪ್ರಕರಣಗಳನ್ನು – ವಾಜ್ಯ ಪೂರ್ವ ಪ್ರಕರಣಗಳು:262
ಒಟ್ಟು: 7,516 ರಾಜಿಯಾಗುವಂತಹಬಯಾವುದೇ ಪ್ರಕರಣಗಳನ್ನು ಕಕ್ಷಿಗಾರರ ವಿನಂತಿಯ ಮೇರೆಗೆ ಸಂಬಂದಪಟ್ಟ ನ್ಯಾಯಾಲಯಗಳಲ್ಲಾಗಲೀ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಸಂಬಂಧಪಟ್ಟ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿನೇಶ್ ಬಿಜೆ,ವಕೀಲರ ಸಂಘದ ಅಧ್ಯಕ್ಷ ಎಂ ಮಹದೇವಸ್ವಾಮಿ,ಉಪಾಧ್ಯಕ್ಷ ಪುಟ್ಟಸಿದ್ದೇಗೌಡ,ಕಾರ್ಯದರ್ಶಿ ಉಮೇಶ್ ಎಸ್ ಹಾಜರಿದ್ದರು.