ಮೈಸೂರು:13 ನವೆಂಬರ್ 2021
ನಂದಿನಿ
ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ನ.೧೪ ರಂದು ಮೈಸೂರಿನ ಕಲಾಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಾಜಶೇಖರ್ ತಿಳಿಸಿದರು.
ಮೈಸೂರು ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಡ್ರಾಮ ಜೂನಿಯರ್ಸ್ ಖ್ಯಾತಿಯ ಮಕ್ಕಳು ಪಾಲ್ಗೊಳ್ಳಲಿದ್ದಾರೆ.ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ೭ ಮಂದಿಗೆ ಕನ್ನಡಾಂಬೆ ರತ್ನ ಪ್ರಶಸ್ತಿ ನೀಡಲಾಗುವುದು ಎಂದರು.