ನಂದಿನಿ ಮೈಸೂರು
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮರಳೂರು ಗೊದ್ದನಪುರ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಉದ್ಘಾಟನೆಯನ್ನು ಸಿದ್ದರಾಮಯ್ಯ ಅವರು ಇಂದು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದರು. ಕ್ಷೇತ್ರದ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.