ಸರಗೂರು:26 ಜನವರಿ 2022
ಇಂದು ತಾಲೂಕಿನ ಪುರಸಭೆ ಕಛೇರಿಯ ಮುಂಭಾಗ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಯ ಸಹಯೋಗದಲ್ಲಿ ಕರಪತ್ರ ಚಳುವಳಿಯನ್ನು ಹಮ್ಮಿಕೊಳ್ಳಲಾಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ಮತಾಂತರ ಕಾಯ್ದೆಯನ್ನು ವಿರೋಧಿಸಿ ಇಂದು ಕರಪತ್ರವನ್ನು ಬಿಡುಗಡೆ ಮಾಡಿ ಚಳುವಳಿಯನ್ನು ಆರಂಭಿಸಿದರು.
ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲ್ಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಕರಪತ್ರವನ್ನು ಬಿಡುಗಡೆಗೊಳಿಸಿದರು.
ಬಳಿಕ ಗ್ರಾಮೀಣಾ ಮಹೇಶ್ ಅವರು ಮಾತನಾಡಿದರು.
ಭಾರತ ಸಂವಿಧಾನವನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಇಂದು ಕರಪತ್ರವನ್ನು ಬಿಡುಗಡೆ ಮಾಡಿ ಚಳುವಳಿಯನ್ನು ಹಮ್ಮಿಕೊಳ್ಳಲಾಯಿತು.
ಸಂವಿಧಾನವನ್ನು ಬದಲಾವಣೆ ಮಾಡುವ ಸಲುವಾಗಿ ಹಲವಾರು ಕಾಣದ ಕೈಗಳು ಕೆಲಸ ನಡೆಸುತ್ತಿದೆ. ಇದರ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ.
ಭಾರತ ಸಂವಿಧಾನವು ಕೇವಲ ಎಸ್.ಸಿ. ಮತ್ತು ಎಸ್.ಟಿ ಸಮುದಾಯಕ್ಕೆ ಸೀಮಿತವಾಗಿದೆ ಎಂದು ಕೆಲವು ವರ್ಗಗಳ ಜನರು ಬಿಂಬಿಸುತ್ತಿದ್ದಾರೆ. ಇದು ತಪ್ಪು ಕಲ್ಪನೆ ಸಂವಿಧಾನವು ಎಲ್ಲಾ ವರ್ಗದ ಅಭಿವೃದ್ಧಿಗೆ ಇರುವ ಆಸ್ತ್ರ ಎಂದರು.
ಬಳಿಕ ಸಾಮಾಜಿಕ ಹೋರಾಟಗಾರರಾದ ಕೃಷ್ಣ ಅವರು ಮಾತನಾಡಿದರು.
ದಲಿತರು ಹಾಗೂ ಹಿಂದುಳಿದ ವರ್ಗಗಳನ್ನು ತುಳಿಯುವ ಕೆಲಸಗಳನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಕಡೆಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು.
ಒಂದುವೇಳೆ ಮತಾಂತರ ಕಾಯ್ದೆಯನ್ನು ಜಾರಿಗೆ ತಂದಲ್ಲಿ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಂಜಯ್ ಕೆ ಬೆಳತೂರು ಜೊತೆ ನಂದಿನಿ ಮೈಸೂರು