ಮೈಸೂರು:11 ಮೇ 2022
ನಂದಿನಿ ಮೈಸೂರು
ನೈಋತ್ಯ ರೈಲ್ವೆ ಮೈಸೂರು ವಿಭಾಗದ ಮಹಿಳಾ ಕಲ್ಯಾಣ ಸಂಸ್ಥೆಯು ಇಂದು ಮೈಸೂರಿನ ವಿಭಾಗೀಯ ವ್ಯವಸ್ಥಾಪಕರ ಕಛೇರಿಯ ಸಭಾಗೃಹದಲ್ಲಿ ಕಾರ್ಮಿಕ ದಿನಾಚರಣೆಯನ್ನು ಆಯೋಜಿಸಿತ್ತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಪೂಜಾ ಅಗರ್ವಾಲ್ ರವರು, 25 ವರ್ಷಗಳಿಗಿಂತ ಹೆಚ್ಚು ಸೇವೆಯನ್ನು ಪೂರ್ಣಗೊಳಿಸಿದ ಮತ್ತು ತಮ್ಮ ಕರ್ತವ್ಯದ ಅವಧಿಯಲ್ಲಿ ಆದರ್ಶಪ್ರಾಯ ಕೆಲಸ ಮಾಡಿದ ಮೈಸೂರು ವಿಭಾಗದ ವಿವಿಧ ಇಲಾಖೆಗಳ 35 ಪ್ರತಿಭಾನ್ವಿತ ಸಿಬ್ಬಂದಿಗಳನ್ನು ಸನ್ಮಾನಿಸಿದರು.ನಂತರ ಮಾತನಾಡಿದ ಶ್ರೀಮತಿ ಪೂಜಾ ಅಗರ್ವಾಲ್ ರವರು ಸಂಸ್ಥೆಗೆ ಸಿಬ್ಬಂದಿಗಳು ಅತ್ಯಂತ ದೊಡ್ಡ ಆಸ್ತಿ ಎಂದು ಹೇಳಿ, ಭಾರತೀಯ ರೈಲ್ವೆಯ ಅಭಿವೃದ್ಧಿಗೆ ಅವರು ಸಲ್ಲಿಸಿರುವ ಗಮನಾರ್ಹ ಸೇವೆಗಾಗಿ ಧನ್ಯವಾದ ಅರ್ಪಿಸಿದರು. ಅವರು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಅವರ ಶ್ರಮವನ್ನು ಶ್ಲಾಘಿಸಿದರು ಮತ್ತು ಪ್ರಶಸ್ತಿ ಪುರಸ್ಕೃತರು ತಮ್ಮ ಉತ್ತಮ ಕೆಲಸವನ್ನು ಮುಂದುವರೆಸುವಂತೆ ಪ್ರೋತ್ಸಾಹಿಸಿದರು.
ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀ ರಾಹುಲ್ ಅಗರ್ವಾಲ್ ರವರು, ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕರುಗಳಾದ ಶ್ರೀ ಎ.ದೇವಸಹಾಯಂ ಹಾಗು ಶ್ರೀ ಬುಡತಿ ಶ್ರೀನಿವಾಸುಲು, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿಗಳಾದ ಶ್ರೀ ಪ್ರಶಾಂತ್ ಮಾಸ್ತಿಹೊಳಿ ಮತ್ತು ಮಹಿಳಾ ಕಲ್ಯಾಣ ಸಂಸ್ಥೆಯ ಸದಸ್ಯರು ಹಾಗು ಮೈಸೂರು ವಿಭಾಗದ ಇತರೆ ಹಿರಿಯ ಅಧಿಕಾರಿಗಳು ಸಭಾಂಗಣದಲ್ಲಿ ಉಪಸ್ಥಿತರಿದ್ದರು
ಡಾ.ಮಂಜುನಾಥ್ ಕನಮಡಿ
ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು
ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿಗಳು,ಮೈಸೂರು.