ಕಿಂಗ್ ಖಾನ್ ಜನ್ಮದಿನಕ್ಕೆ ಬಂತು ‘ಡಂಕಿ’ ಟೀಸರ್

ನಂದಿನಿ ಮೈಸೂರು

*ಕಿಂಗ್ ಖಾನ್ ಜನ್ಮದಿನಕ್ಕೆ ಬಂತು ‘ಡಂಕಿ’ ಟೀಸರ್…ಹೇಗಿದೆ ರಾಜ್ ಕುಮಾರ್ ಹಿರಾನಿ ಹಾಗೂ ಶಾರುಖ್ ಕಾಂಬೋದ ಮೊದಲ ಝಲಕ್..ಕ್ರಿಸ್ಮಸ್ ಗೆ ‘ಡಂಕಿ’ ಧಮಾಕ ಶುರು*

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಗಿಂದು ಜನ್ಮದಿನದ ಸಂಭ್ರಮ. 58ನೇ ವಸಂತಕ್ಕೆ ಕಾಲಿಟ್ಟಿರುವ ಬಾದ್ ಷಾಗೆ ಶುಭಾಷಯಗಳ ಮಹಾಪೂರವೇ ಹರಿದುಬರ್ತಿದೆ. ಕಿಂಗ್ ಖಾನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಡಂಕಿ ಸಿನಿಮಾದ ಟೀಸರ್ ಉಡುಗೊರೆಯಾಗಿ ಸಿಕ್ಕಿದೆ.

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದೆ. ಒಂದೊಳ್ಳೆ ಸಂದೇಶದ ಜೊತೆಗೆ ಮನರಂಜನಾತ್ಮಕ ಅಂಶಗಳನ್ನು ಬೆರೆಸಿ ಎಣೆದಿರುವ ಡಂಕಿ ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ.

ಶಾರುಖ್ ಖಾನ್ ನಾಯಕನಾಗಿ ನಟಿಸಿದ್ದು, ಬೊಮನ್ ಇರಾನಿ, ತಾಪ್ಸೀ ಪನ್ನು, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ತಾರಾಬಳಗದಲ್ಲಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು JIO ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ನಡಿ ರಾಜ್‌ಕುಮಾರ್ ಹಿರಾನಿ ಮತ್ತು ಗೌರಿ ಖಾನ್ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

Leave a Reply

Your email address will not be published. Required fields are marked *